ಮಂಗಳೂರಿಗೆ ದಲಾಯಿಲಾಮ

ಮಂಗಳೂರಿಗೆ ದಲಾಯಿಲಾಮ

ಮಂಗಳೂರು, ಆ. 29 : ಟಿಬೆಟ್ ಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಇಂದು ಮಂಗಳೂರಿಗೆ ಆಗಮಿಸಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು. ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos