ಬೆಂಗಳೂರು: ಬಹಳಷ್ಟು ಅಭ್ಯರ್ಥಿಗಳು ರೋಡ್ ಶೋ, ಸಾರ್ವಜನಿಕ ಸಭೆ ಬಳಿಕ ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಸುವ ವೇಳೆ ಆಯಾ ಪಕ್ಷದ ನಾಯಕರು, ಮುಖಂಡರು ಅಭ್ಯರ್ಥಿಗಳಿಗೆ ಸಾಥ್ ನೀಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೆತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ರವರು ಬುಧವಾರ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಬೆಂಗಳೂರು ಕೇಂದ್ರ ಚುನಾವಣಾಧಿಕಾರಿಯಾದ ಡಾ. ಕೆ. ಹರೀಶ್ ಕುಮಾರ್ ರವರಿಗೆ ನಾಮಪತ್ರ ಸಲ್ಲಿಸಿದರು.
ಮನ್ಸೂರ್ ಅಲಿ ಖಾನ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಘನಾಘಟಿ ನಾಯಕರು ನಾಮಪತ್ರ ಸಲ್ಲಿಕೆ ಮೂಲಕ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಇದರಿಂದ ಲೋಕಸಭಾ ಚುನಾವಣಾ ಕಣ ರಂಗೇರತೊಡಗಿದೆ.