ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳ ಬೆಂಬಲ

ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳ ಬೆಂಬಲ

ಬೆಂಗಳೂರು, ಫೆ. 13: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, 600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯ ಸ್ಥಬ್ಧವಾಗಲಿದೆ.

ಹಲವು ಕನ್ನಡ ಸಂಘಟನೆಗಳು, ಆಟೋ ಚಾಲಕರ ಸಂಘಟನೆಗಳು, ಓಲಾ, ಊಬರ್ ಚಾಲಕರು, ಕೆಲ ಕಾರ್ಮಿಕ ಸಂಘಟನೆಗಳು ಈ ಬಂದ್ ಗೆ  ಬೆಂಬಲ ನೀಡಿವೆ. ಆದರೆ, ಬಿಎಂಟಿಸಿ, ಕೆಎಸ್ಆರ್ಟಿಸಿ, ನಮ್ಮ ಮೆಟ್ರೋ, ಹೋಟೆಲ್ ಸಂಘಟನೆಗಳು, ಔಷಧಿ ಅಂಗಡಿಗಳ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿಲ್ಲ.

ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಬಂದ್ ಗೆ  ಬೆಂಬಲ ನೀಡುವುದಿಲ್ಲ ಎಂದು ಹಲವು ಸಂಘಟನೆಗಳು ಹೇಳಿವೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೇರಿದಂತೆ ಇನ್ನೂ ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೆ ಘೋಷಿಸಿವೆ.

“ಮಹಿಷಿ ವರದಿ ಜಾರಿ ಬಗ್ಗೆ ನನ್ನ ಬಳಿ ಬಂದು ನೇರವಾಗಿ ಮಾತನಾಡಿ, ಬಂದ್ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಂದ್ ಕೈ ಬಿಡುವಂತೆ ಮನವಿ ಮಾಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos