ಮಾ. 31ಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮಾವೇಶ

ಮಾ. 31ಕ್ಕೆ ಕಾಂಗ್ರೆಸ್  ಮತ್ತು ಜೆಡಿಎಸ್ ಸಮಾವೇಶ

ಬೆಂಗಳೂರು, ಮಾ. 19, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಪಕ್ಷಗಳು ಸೇರಿಕೊಂಡು  ಇದೇ ಮಾ. 31ರಂದು ಬೆಂಗಳೂರಿನಲ್ಲಿ ಐತಿಹಾಸಿಕ ಸಮಾವೇಶ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾವು ಲೋಕಸಭಾ ಚುನಾವಣೆಯನ್ನ ಗಂಭೀರವಾಗಿ ಪರಿಗಣಿಸಿದ್ದೇವೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.

28 ಕ್ಷೇತ್ರಗಳಲ್ಲೂ ಗೆಲ್ಲುವುದೇ ನಮ್ಮ ಗುರಿಯಾಗಿದೆ. ಈ ಬಗ್ಗೆ ಇದೀಗ ಸುದೀರ್ಘ ಚರ್ಚೆಯಾಗಿದೆ. 2-3 ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿವೆ. ಆ ಸಮಸ್ಯೆ ಸರಿಪಡಿಸುವ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅದನ್ನು ನೋಡಿಕೊಳ್ಳುತ್ತಾರೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos