ಮದುವೆಗೆ ಬಂದವರು ಮಸಣಕ್ಕೆ

ಮದುವೆಗೆ ಬಂದವರು ಮಸಣಕ್ಕೆ

ಪಾಟ್ನಾ, ಜು. 11 :  ಮದುವೆ ಮೆರವಣಿಗೆ  ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ.

ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos