ಮಸೂದ್ ಅಝರ್ ಗೆ ಚೀನಾ ಬೆಂಬಲ

ಮಸೂದ್ ಅಝರ್ ಗೆ ಚೀನಾ ಬೆಂಬಲ

ವಾಷಿಂಗ್ಟನ್, ಮಾ. 14, ನ್ಯೂಸ್ ಎಕ್ಸ್ ಪ್ರೆಸ್ : ವಿಶ್ವ ಸಂಸ್ಥೆ ಭದ್ರತಾ ಸಮಿತಿ ಸಭೆಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮಸೂದ್ ಅಝರ್ ರನ್ನು ಜಾಗತಿಕ ಉಗ್ರ ಎಂದು ಘೋಷಿಸಿ, ಕಪ್ಪು ಪಟ್ಟಿಗೆ ಸೇರಿಸಲು ಅಡ್ಡಗಾಲು ಹಾಕಿದ ಚೀನಾವನ್ನು ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಸದಸ್ಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ತನ್ನ ನಿಲುವನ್ನು ಬದಲಿಸಿಕೊಳ್ಳದೆ, ಇದೇ ರೀತಿಯ ಉದ್ದಟತನ ಮುಂದುವರಿಸಿದರೆ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಯುಎಸ್ ಎಸ್ ಸಿ ಸದಸ್ಯರು ಎಚ್ಚರಿಕೆ ನೀಡಿದ್ದಾರ

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾರತೀಯ ಸೇನೆಯ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾದ ಘಟನೆಯ ನಂತರ ಜೈಷ್ ಇ ಮೊಹಮ್ಮದ್ ಸಂಘಟನೆಯೇ ಅದರ ಹೊಣೆ ಹೊತ್ತುಕೊಂಡಿತ್ತು. ಅದಜೊತೆಗೆ ಹಲವು ಉಗ್ರದಾಳಿಯಲ್ಲಿ ತನ್ನ ಕೈವಾಡವನ್ನು ಜೆಇಎಂ ಸ್ವತಃ ಒಪ್ಪಿಕೊಂಡಿದ್ದರೂ, ಅದರ ಮುಖ್ಯಸ್ಥ ಮಸೂದ್ ಅಝರ್ ಬೆಂಬಲಕ್ಕೆ ನಿಂತ ಚೀನಾ ನಡೆಯನ್ನು ಸದಸ್ಯರು ಟೀಕಿಸಿದ್ದಾರೆ.

ಪುಲ್ವಾಮಾ ಘಟನೆಯ ನಂತರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಾದ ಅಮೆರಿಕ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳು ಅಝರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ಪ್ರಸ್ತಾವವನ್ನು ವಿಶ್ವಸಂಸ್ಥೆಯ ತಿಳಿಸಿವೆ.

 

 

ಫ್ರೆಶ್ ನ್ಯೂಸ್

Latest Posts

Featured Videos