ಭಾರಿ ಸ್ಫೋಟ : ಬೆಚ್ಚಿಬಿದ್ದ ಜನತೆ

  • In Crime
  • August 16, 2021
  • 171 Views
ಭಾರಿ ಸ್ಫೋಟ : ಬೆಚ್ಚಿಬಿದ್ದ ಜನತೆ

ಬೆಂಗಳೂರು: ಹಂಪಿನಗರದ ಮನೆಯೊಂದರಲ್ಲಿ ಮಧ್ಯರಾತ್ರಿ 12.45ರ ಸುಮಾರಿಗೆ ಸ್ಫೋಟಗೊಂಡಿದ್ದು, ದಂಪತಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.

2 ಮಹಡಿ ಕಟ್ಟಡದ ಮೊದಲ ಮಹಡಿ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇದಕ್ಕೆ ಕಾರಣ ಇದುವರೆಗೂ ತಿಳಿದಿಲ್ಲ. ಸೂರ್ಯನಾರಾಯಣ ಶೆಟ್ಟಿ, ಪತ್ನಿ ಪುಷ್ಪಾವತಮ್ಮಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

ಅಕ್ಕಪಕ್ಕದ ಮನೆ ಗಾಜುಗಳು ಪುಡಿ, ಪುಡಿಯಾಗಿದ್ದು ಗೋಡೆಗಳು ಬಿರುಕು ಬಿಟ್ಟಿವೆ. ಈ ಸ್ಫೋಟದ ಶಬ್ದಕ್ಕೆ ಅಕ್ಕಪಕ್ಕದ ಜನ ಬೆಚ್ಚಿಬಿದ್ದಿದ್ದಾರೆ. ಅಕ್ಕಪಕ್ಕದ 5ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಯ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಕಟ್ ಆಗಿದೆ. ಸುಮಾರು 1 ಕಿ.ಮೀ.ವರೆಗೂ ಸ್ಫೋಟದ ಸದ್ದು ಕೇಳಿಸಿದೆ. ಸದ್ಯ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos