ಇಂದು ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ!

ಇಂದು ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ!

ಬೆಂಗಳೂರು, ಸೆ. 11: ಇಂದು ಸಿಲಿಕಾನ್ ಸಿಟಿಯಲ್ಲಿ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗ ಸಂಘಗಳು ಪ್ರತಿಭಟನಾ ರ‍್ಯಾಲಿ ನಡೆಸುತ್ತಿವೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ರ‍್ಯಾಲಿ ಸಾಗುವ ಮಾರ್ಗ ಮಧ್ಯೆ ಖಾಕಿ ಕಣ್ಗಾವಲು ಇಟ್ಟಿದೆ.

11 ಜನ ಡಿಸಿಪಿ, 40 ಎಸಿಪಿಗಳು, 200ಕ್ಕೂ ಹೆಚ್ಚು ಇನ್ಸ್ಪೆಕ್ಟರ್, 40 ಕೆಎಸ್ಆರ್ಪಿ, 30 ಸಿಎಆರ್, 12 ಕ್ಷಿಪ್ರ ಕಾರ್ಯಚರಣೆ ಪಡೆಯನ್ನು ನಿಯೋಜನೆ ಮಾಡಲಾಗಿದೆ.

ಮಾರ್ಗ ಮಧ್ಯೆ  ಅಹಿತಕರ ಘಟನೆಗಳು ನಡೆಯದಂತೆ 2800 ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. 11 ಜನ ಡಿಸಿಪಿಗಳ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ. ಪ್ರತಿಭಟನಾ ರ‍್ಯಾಲಿ ಸಾಗುವ ಮಾರ್ಗದಲ್ಲಿ 50 ಸಿಸಿಟಿವಿಗಳ ಅಳವಡಿಕೆ ಮಾಡಲಾಗಿದೆ.

ಡಿಕೆಶಿ ಬಂಧನದ ವೇಳೆ ಹಲವೆಡೆ ಬಸ್ಗಳಿಗೆ ಕಲ್ಲು ತೂರಾಟ, ಬೆಂಕಿ ಹಾಕಿದ್ದು, ರಸ್ತೆಗಳಲ್ಲಿ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಪೊಲೀಸ್ ಆಯುಕ್ತರ 15 ಸೂಚನೆ ಮೇರೆಗೆ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos