CAA ವಿರುದ್ಧ ಬೃಹತ್ ಪ್ರತಿಭಟನೆ

CAA ವಿರುದ್ಧ ಬೃಹತ್ ಪ್ರತಿಭಟನೆ

ಬೆಂಗಳೂರು, ಜ. 03: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗ್ತಿದೆ. ಮೈದಾನದಲ್ಲಿ ಕಾಯ್ದೆ ವಿರುದ್ಧ ಬೃಹತ್ ಫ್ಲೆಕ್ಸ್ ಹಾಕಲಾಗಿದೆ. ಕನ್ನಡ ಬಾವುಟ ಹಾಗೂ ರಾಷ್ಟ್ರಧ್ವಜ ರಾರಾಜಿಸುತ್ತಿವೆ.

ಧರ್ಮದ ಆಧಾರದ ಮೇಲೆ ಭಾರತವನ್ನು ವಿಭಜಿಸೋದು ನಿಲ್ಲಿಸಿ, ಸಂವಿಧಾನ ಉಳಿಸಿ, ಭಾರತ ಉಳಿಸಿ ಎಂಬ ದೊಡ್ಡ ಫ್ಲೆಕ್ಸ್ ಹಾಕಲಾಗಿದೆ. ಜೊತೆಗೆ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರವಿದೆ. ಅಲ್ದೇ ರಿಜೆಕ್ಟ್ NRC, ರಿಜೆಕ್ಟ್ CAA ಅಂತ ಬ್ಯಾನರ್ ಹಾಕಲಾಗಿದೆ.

ಆಯೋಜಕರು 2 ಗಂಟೆಯಿಂದ 4 ಗಂಟೆವರೆಗೆ ಪ್ರತಿಭಟನಾ ಸಮಾವೇಶಕ್ಕೆ ಅನುಮತಿ ಪಡೆದಿದ್ದಾರೆ. ಭದ್ರತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ನೇತೃತ್ವದಲ್ಲಿ, ಡಿಸಿಪಿ ರಮೇಶ್ ಬಾನೋತ್ ಸೇರಿದಂತೆ ಒಟ್ಟು 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.

ಶಾಸಕ ಜಮೀರ್ ಅಹ್ಮದ್ ಜೊತೆಗೆ ಅಲ್ತಾಫ್ ಖಾನ್ ಸೇರಿದಂತೆ ಮೌಲ್ವಿಗಳು ಹಾಗೂ ಮುಸ್ಲಿಂ ಮುಖಂಡರಿಗೆ ವೇದಿಕೆ ಮೇಲೆ ಆಸನದ ವ್ಯವಸ್ಥೆ ಮಾಡಲಾಗಿದೆ. ಟೌನ್ ಹಾಲ್ ಬಳಿಯೂ ಸಿಎಎ-ಎನ್ಆರ್ಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos