ಡಿಕೆಶಿ ಇಡಿ ದಾಳಿ ಖಂಡಿಸಿ ಬೃಹತ್ ಪ್ರತಿಭಟನೆ

ಡಿಕೆಶಿ ಇಡಿ ದಾಳಿ ಖಂಡಿಸಿ ಬೃಹತ್ ಪ್ರತಿಭಟನೆ

ಆನೇಕಲ್, ಸೆ. 3: ಅಕ್ರಮ ಹಣ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಟ್ಟಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಇಡಿ ದಾಳಿ ಖಂಡಿಸಿ ಆನೇಕಲ್ ನ ಬ್ಲಾಕ್ ಕಾಂಗ್ರೆಸ್ ಸಮಿತಿವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಆನೇಕಲ್ ನ ಚೌಡರೆಡ್ಡಿ ಸರ್ಕಲ್ ನಲ್ಲಿ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ. ರಾಜ್ಯ ಹಾಗು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಜನರು. ಸುಮಾರು 200 ಕ್ಕೂ ಹೆಚ್ಚು ಜನ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿ. ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಗೆ ವಿಚಾರಣೆಯ ನೆಪದಲ್ಲಿ ನಿರಂತರ ವಾಗಿ ಕಿರುಕುಳ ನೀಡುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos