ಮತದಾನ ಮಾಡಲು ಬೆಂಗಳೂರಿನಿಂದ ಬೀದರ್ ಗೆ ವಿಶೇಷ ರೈಲು

ಮತದಾನ ಮಾಡಲು ಬೆಂಗಳೂರಿನಿಂದ ಬೀದರ್ ಗೆ ವಿಶೇಷ ರೈಲು

ಬೀದರ್, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದೆ, ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕದ ಮತದಾರರಿಗೆ ಇಂದು ಯಶವಂತಪುರದಿಂದ ಬೀದರ್ ಗೆ ವಿಶೇಷ ರೈಲನ್ನು ನೈರುತ್ಯ ರೈಲ್ವೆ ಸಂಚಾರಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಈ ಮೂಲಕ ಉತ್ತರ ಕರ್ನಾಟಕದಿಂದ ಕೆಲಸಕ್ಕಾಗಿ ಉದ್ಯೋಗಿಗಳು, ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನರು ರಾಜಧಾನಿ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಇವರು ನಾಳೆ ಮತದಾನದಿಂದ ವಂಚಿರಾಗ ಬಾರದು ಎನ್ನುವ ಉದ್ದೇಶದಿಂದ ರೈಲ್ವೆ ಇಲಾಖೆ ಈ ಕೆಲಸಕ್ಕೆ ಮುಂದಾಗಿದೆ.

ಇಂದು ಸಂಜೆ 6.10ಕ್ಕೆ ಯಶವಂತಪುರದಿಂದ ಬೀದರ್ ಗೆ ತತ್ಕಾಲ್ ಎಕ್ಸ್ ಪ್ರೆಸ್ ವಿಶೇಷ ರೈಲು ಹೊರಡಲಿದೆ. ರೈಲು ಧರ್ಮಾವರಂ, ಅನಂತಪುರ, ಗುಂತಕಲ್, ರಾಯಚೂರು, ಸೈದಾಪುರ, ಯಾದಗಿರಿ, ವಾಡಿ ಹಾಗೂ ಕಲಬುರಗಿ ಮಾರ್ಗವಾಗಿ ಏ. 23ರ ಬೆಳಗ್ಗೆ 6 ಗಂಟೆಗೆ ಬೀದರ್ ತಲುಪಲಿದೆ. ಅದೇ ವಿಶೇಷ ರೈಲು ಏ. 23ರ ಸಂಜೆ 7 ಗಂಟೆಗೆ ಬೀದರ್ ನಿಂದ ಹೊರಡಲಿದ್ದು ಏ.24ರ ಬೆಳಗ್ಗೆ 8.15ಕ್ಕೆ ಯಶವಂತಪುರ ರೈಲ್ವೆ ನಿಲ್ದಾಣ ತಲುಪಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos