ಮತದಾನ ಮಾಡಿದ ಸಿದ್ದರಾಮಯ್ಯ

ಮತದಾನ ಮಾಡಿದ ಸಿದ್ದರಾಮಯ್ಯ

ಮೈಸೂರು, ಏ. 18, ನ್ಯೂಸ್ ಎಕ್ಸ್ ಪ್ರೆಸ್: ಇಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ತಾಲೂಕಿನ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದರು.

ತಮ್ಮ ಪುತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರ ಜೊತೆ ಇಂದು ಮತಗಟ್ಟೆಗೆ ಆಗಮಿಸಿದ ಅವರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು.

ಸಿದ್ದರಾಮನಹುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 86ರಲ್ಲಿ ಅವರು ಮತ ಚಲಾಯಿಸಿದರು.

ಸಿದ್ದರಾಮಯ್ಯರನ್ನು ಕಂಡ ಗ್ರಾಮಸ್ಥರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದರು.

ಫ್ರೆಶ್ ನ್ಯೂಸ್

Latest Posts

Featured Videos