ಮತ್ತೆ ಮಲೆನಾಡಲ್ಲಿ ವರುಣನ ಆರ್ಭಟ

ಮತ್ತೆ ಮಲೆನಾಡಲ್ಲಿ ವರುಣನ ಆರ್ಭಟ

ಚಿಕ್ಕಮಗಳೂರು, ಸೆ. 8 : ಮಲೆನಾಡಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಭಾರೀ ಮಳೆಯಿಂದ ಜನ ಜೀವನ ತತ್ತರವಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆಯ ದಾರದಹಳ್ಳಿ, ಬೈರಾಪುರ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುತ್ತಾಮುತ್ತ ಭಾರೀ ಮಳೆಯಾಗುತ್ತಿದೆ. ಮೂಡಿಗೆರೆ ತಾಲೂಕಿನ ಹನುಮನಹಳ್ಳಿಯಲ್ಲಿ ಎರಡು ಎಕರೆ ಪ್ರದೇಶದಲ್ಲಿ ಭೂಮಿ ಕುಸಿದಿದೆ. ಪರಿಣಾಮ 2 ಎಕರೆ ಕಾಫಿ ಸಂಪೂರ್ಣ ನಾಶವಾಗಿದೆ. ತಾರಾನಾಥ್ ಎಂಬವರಿಗೆ ಈ ತೋಟ ಸೇರಿದ್ದು, ಕಾಫಿ, ಮೆಣಸು, ಅಡಿಕೆ ಸಂಪೂರ್ಣ ಹಾನಿಯಾಗಿದೆ. ಎನ್.ಆರ್.ಪುರ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ತಾಲೂಕಿನಲ್ಲೂ ಮಳೆಯಾಗುತ್ತಿದ್ದು, ಪರಿಣಾಮ ನದಿಗಳ ಹರಿವಿನ ಮಟ್ಟ ಹೆಚ್ಚಾಗಿದೆ. ತುಂಗಾ, ಭದ್ರಾ ಮತ್ತು ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿದೆ. ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹೆಬ್ಬಾಳೆ ಸೇತುವೆ ಮುಳುಗಡೆಗೆ ಇನ್ನೂ ಒಂದೇ ಅಡಿ ಬಾಕಿ ಇದೆ.

ಫ್ರೆಶ್ ನ್ಯೂಸ್

Latest Posts

Featured Videos