ಮತ್ತೊಮ್ಮೆ ಮಾಯಾಂಕ್ ಮಿಂಚು

ಮತ್ತೊಮ್ಮೆ ಮಾಯಾಂಕ್ ಮಿಂಚು

ಪುಣೆ,ಅ. 10 : ಕನ್ನಡಿಗ ಮಯಾಂಕ್ ಅಗರ್ವಾಲ್ ಖಾತೆಗೆ ಮತ್ತೊಂದು ಅರ್ಧಶತಕ ಸೇರ್ಪಡೆಯಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 112 ಎಸೆತಗಳಲ್ಲಿ ಮಯಾಂಕ್ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು.
ಪುಣೆಯಲ್ಲಿ ಆರಂಭವಾದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಮತ್ತೊಮ್ಮೆ ಬ್ಯಾಟಿಂಗ್’ನಲ್ಲಿ ಕಮಾಲ್ ಮಾಡಿದ್ದಾರ. ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಮಿಂಚಿದ್ದ ಮಯಾಂಕ್ ಅಗರ್ವಾಲ್ ಇದೀಗ ಮತ್ತೊಂದು ಅಂತಹದ್ದೇ ಇನಿಂಗ್ಸ್ ಕಟ್ಟುವ ಮೂಲಕ ಆತ್ಮವಿಶ್ವಾಸದಿಂದಲೇ ಬ್ಯಾಟ್ ಬೀಸಿದ ಮಯಾಂಕ್ ಅಭಿಮಾನಿಗಳನ್ನು ರಂಜಿಸಿದರು. ಇದು ಮಯಾಂಕ್ ಬಾರಿಸಿದ ನಾಲ್ಕನೇ ಅರ್ಧಶತಕವಾಗಿದೆ. ಮೆಲ್ಬರ್ನ್[76] ಹಾಗೂ ಸಿಡ್ನಿ[77] ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್’ನಲ್ಲಿ ಅರ್ಧಶತಕ ಬಾರಿಸಿ ಭರವಸೆ ಮೂಡಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos