ಮಾವಿನ ಮರವೇರಿದ ಜನಾರ್ದನ ರೆಡ್ಡಿ..!

ಮಾವಿನ ಮರವೇರಿದ ಜನಾರ್ದನ ರೆಡ್ಡಿ..!

ಬೆಂಗಳೂರು, ಮೇ. 21, ನ್ಯೂಸ್ ಎಕ್ಸ್ ಪ್ರೆಸ್ : ತೋಟದಲ್ಲಿ 27 ವರ್ಷಗಳ ಹಿಂದೆ ನೆಟ್ಟಿದ್ದ ಮಾವಿನ ಗಿಡಗಳು ಹೆಮ್ಮರವಾಗಿ ಬೆಳೆದು ಮಾವಿನ ಹಣ್ಣುಗಳಿಂದ ತುಂಬಿಕೊಂಡ ದೃಶ್ಯ ಮನ ಸೆಳೆಯಿತು. ಕೂಡಲೇ ನಾನೇ ಮರವನ್ನು ಹತ್ತಿ ಮಾವಿನ ಹಣ್ಣನ್ನು ಕಿತ್ತು ನನ್ನ ಶ್ರೀಮತಿಗೆ ನೀಡಿದೆ.  ಮರವೇರಿ ಇಳಿದ ತಕ್ಷಣ ಬಾಲ್ಯದ ದಿನಗಳಲ್ಲಿ ಸ್ನೇಹಿತರೊಂದಿಗೆ ಸೇರಿ ಮರವೇರಿ ಆಡುತ್ತಿದ್ದ ಆಟಗಳು, ಜೊತೆಯಲ್ಲಿದ್ದ ಸ್ನೇಹಿತರು ನೆನಪಿಗೆ ಬಂದರು ಎಂದು ಬರೆದು ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರ  ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಜೊತೆಗೆ ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ..

 

ಫ್ರೆಶ್ ನ್ಯೂಸ್

Latest Posts

Featured Videos