ಮ್ಯಾಕ್ಸಿ ಅಬ್ಬರಕ್ಕೆ ಹೊಸ ದಾಖಲೆ

ಮ್ಯಾಕ್ಸಿ ಅಬ್ಬರಕ್ಕೆ ಹೊಸ ದಾಖಲೆ

ಬೆಂಗಳೂರು: ನಿನ್ನೆ ಅಡಿಲೇಡ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದ ವೇಳೆ ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಐದನೇ ಟಿ20 ಅಂತಾರಾಷ್ಟ್ರೀಯ ಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದರು.

ವೆಸ್ಟ್ ಇಂಡೀಸ್ ವಿರುದ್ಧ ಕೇವಲ 55 ಎಸೆತಗಳಲ್ಲಿ ಅಜೇಯ 120 ರನ್ ಗಳಿಸಿದ ಗ್ಲೆನ್ ಮ್ಯಾಕ್ಸ್‌ವೆಲ್ ಪುರುಷರ ಟಿ20 ಶತಕಗಳ ದಾಖಲೆಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿ, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸಮಗೊಳಿಸಿದರು.

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್​ವೆಲ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​​ಗೆ ಒತ್ತು ನೀಡಿದ ಮ್ಯಾಕ್ಸಿ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಇದಾದ ಬಳಿಕ ಸಿಡಿಲಬ್ಬರ ಶುರು ಮಾಡಿದ ಮ್ಯಾಕ್ಸ್​ವೆಲ್ ಕೇವಲ 50 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 5 ಶತಕಗಳನ್ನು ಬಾರಿಸಿರುವ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದರು.

ಮ್ಯಾಕ್ಸ್​ವೆಲ್ ಕೇವಲ 94 ಟಿ20 ಇನಿಂಗ್ಸ್​ಗಳಲ್ಲಿ 5 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 100 ಕ್ಕಿಂತ ಕಡಿಮೆ ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ 55 ಎಸೆತಗಳನ್ನು ಎದುರಿಸಿದ ಮ್ಯಾಕ್ಸ್​ವೆಲ್ 8 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 120 ರನ್​ ಬಾರಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos