ರೋಹಿತ್ ಶರ್ಮಾ ದಾಖಲೆಯನ್ನಾ ಸರಿಗಟ್ಟಿದ ಮ್ಯಾಕ್ಸಿ!

ರೋಹಿತ್ ಶರ್ಮಾ ದಾಖಲೆಯನ್ನಾ ಸರಿಗಟ್ಟಿದ ಮ್ಯಾಕ್ಸಿ!

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯ ಜಯಿಸಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ ಇದೀಗ ತೃತೀಯ ಟಿ20 ಪಂದ್ಯಕ್ಕೆ ಸಜ್ಜಾಗಿದೆ. ನಿನ್ನೆ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಈ ಪಂದ್ಯ ಅತ್ಯಂತ ರೋಚಕದಿಂದ ಕೂಡಿತ್ತು.

ಭಾರತ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

ಮ್ಯಾಕ್ಸ್‌ವೆಲ್ ಈ ಪಂದ್ಯದಲ್ಲಿ 48 ಎಸೆತಗಳನ್ನು ಎದುರಿಸಿ ಒಟ್ಟು ಎಂಟು ಬೌಂಡರಿ ಮತ್ತು 8 ಸಿಕ್ಸರ್‌ಗಳ ಸಹಾಯದಿಂದ ಅಜೇಯ 104 ರನ್ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಈ ಮಾದರಿಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ನಾಲ್ಕನೇ ಶತಕ ಇದಾಗಿದ್ದು, ಇದರೊಂದಿಗೆ ಪುರುಷರ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿರುವ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇನ್ನು ಟಿ20ಯಲ್ಲಿ ಅಧಿಕ ಶತಕ ಸಿಡಿಸಿರುವ ಆಟಗಾರರ ಪೈಕಿ ರೋಹಿತ್ ಶರ್ಮಾ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ತಲಾ 4 ಶತಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಬಾಬರ್ ಆಝಂ ಹಾಗೂ ಸೂರ್ಯಕುಮಾರ್ ಯಾದವ್ ತಲಾ 3 ಶತಕ ಸಿಡಿಸಿ ನಂತರದ ಸ್ಥಾನದಲ್ಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos