ಮೇ 24ರಂದು ಮೋದಿ ‘ಬಯೋಪಿಕ್’ ಬಿಡುಗಡೆ

ಮೇ 24ರಂದು ಮೋದಿ ‘ಬಯೋಪಿಕ್’ ಬಿಡುಗಡೆ

ನವದೆಹಲಿ, ಮೇ.3, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಮರುದಿನದಂದು ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಆಧಾರಿಸಿದ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಮೋದಿ ಚಿತ್ರದ ಬಿಡುಗಡೆಗೆ ಅನುಮತಿ ಸಿಕ್ಕಿರಲಿಲ್ಲ. ಮೋದಿ ಚಿತ್ರ ಬಿಡುಗಡೆ ಕುರಿತಂತೆ ಸುಪ್ರೀಂಕೋರ್ಟಿಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡಿರುವ ಚುನಾವಣಾ ಆಯೋಗವು, ಮೇ 24ರಂದು ಚಿತ್ರ ಬಿಡುಗಡೆ ಮಾಡಬಹುದು ಎಂದು ತಿಳಿಸಿದೆ.

ಈಗಾಗಲೇ ಆಯೋಗದ ಪ್ರಮುಖದ ಸದಸ್ಯರು ಮೋದಿ ಚಿತ್ರವನ್ನು ವೀಕ್ಷಿಸಿದ್ದು, ನಂತರ ಈ ನಿರ್ಧಾರ ಕೈಗೊಂಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಈ ಮುಂಚೆ ಈ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಈ ಬಗ್ಗೆ ಚುನಾವಣಾ ಆಯೋಗ ನೀಡುವ ಶಿಫಾರಸ್ಸನ್ನು ಪರಿಗಣಿಸುವುದಾಗಿ ಹೇಳಿದ್ದರು.

ಚಿತ್ರ ಬಿಡುಗಡೆಗೆ ಚುನಾವಣಾ ಆಯೋಗವು ನಿರ್ಬಂಧ ಹೇರಿದ್ದರಿಂದ ಚಿತ್ರದ ನಿರ್ಮಾಪಕರು, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos