ಮೇ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

ಮೇ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

ಬೆಂಗಳೂರು, ಏ. 24, ನ್ಯೂಸ್ ಎಕ್ಸ್ ಪ್ರೆಸ್:  ಮೇ. 23ಕ್ಕೆ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದರೆ, ಇನ್ನೊಂದೆಡೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಹಣೆ ಬರಹವೂ ಮೇ. 23ರಂದೇ  ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಭವಿಷ್ಯದೊಂದಿಗೆ ಮೇ ತಿಂಗಳ ಧಗೆ ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ಚುನಾವಣಾ ಗೊಂದಲದಲ್ಲಿಯೇ, ಸಿಇಟಿ ಪರೀಕ್ಷೆಗೂ ಮುನ್ನವೇ ಪಿಯುಸಿ ಫಲಿತಾಂಶ ಪ್ರಕಟಿಸಿದ ಪಿಯು ಬೋರ್ಡ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿತು. ಇದೀಗ ಎಸ್.ಎಸ್.ಎಲ್.ಸಿ ಫಲಿತಾಂಶ ಮೇ ತಿಂಗಳಲ್ಲಿ ಪ್ರಕಟವಾಗಬಹುದೆಂದು ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಹೇಳಿದೆ.

ಫ್ರೆಶ್ ನ್ಯೂಸ್

Latest Posts

Featured Videos