ಅಭಿನಂದನೆ ತಿಳಿಸಿದ ಮಾಯಾವತಿ

ಅಭಿನಂದನೆ ತಿಳಿಸಿದ ಮಾಯಾವತಿ

ಲಕ್ನೋ, ಡಿ. 6 : ಹೈದರಾಬಾದಿನ ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಬಗ್ಗೆ ಬಹುಜನ್ ಸಮಾಜ್ ಪಕ್ಷ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, ದೆಹಲಿ, ಉತ್ತರ ಪ್ರದೇಶ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿ, ಮಾಯಾವತಿ ಹೈದರಾಬಾದ್ ಪೊಲೀಸರಿಗೆ ಅಭಿನಂದನೆ ತಿಳಿಸಿದರು. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಸಾಕಷ್ಟು ಒತ್ತು ಕೊಟ್ಟಿಲ್ಲವೆಂದು ಯೋಗಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಫ್ರೆಶ್ ನ್ಯೂಸ್

Latest Posts

Featured Videos