ಮಕ್ಕಳ ಆರೋಗ್ಯ ಅಭಿವೃದ್ಧಿಗೆ ಕ್ರಮ : ಸುಧಾಕರ್

  • In State
  • August 18, 2021
  • 141 Views
ಮಕ್ಕಳ ಆರೋಗ್ಯ ಅಭಿವೃದ್ಧಿಗೆ ಕ್ರಮ : ಸುಧಾಕರ್

ಬೆಂಗಳೂರು : ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿಯ ಪರಿಶೀಲನೆಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬುಧವಾರ ಸಭೆ ನಡೆಸಿದರು.

ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳನ್ನು ಗುರುತಿಸಿದ್ದು, ಅವರ ಆರೋಗ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇನ್ನು ಒಂದೇ ವಾರದಲ್ಲಿ ‘ಆರೋಗ್ಯ ನಂದನ’ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದು, ರಾಜ್ಯದ ಒಂದೂವರೆ ಕೋಟಿ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ವಿಶೇಷ ಆರೈಕೆ, ಚಿಕಿತ್ಸೆ ನೀಡಿ ಅವರನ್ನು ರಕ್ಷಿಸುವ ಕೆಲಸ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಈ ಜಿಲ್ಲೆಗಳಲ್ಲಿ ಹೊಸ ಜಿಲ್ಲಾಕೇಂದ್ರ ಇನ್ನೂ ಅಂತಿಮ ಆಗಿಲ್ಲ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಆದಷ್ಟು ಬೇಗ ನಿಗದಿಪಡಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು. ಈಗಾಗಲೇ 29 ವೈದ್ಯರನ್ನು ಜಿಲ್ಲೆಗೆ ನೀಡಲಾಗಿದೆ. ಆದ್ದರಿಂದ ಯಾವುದೇ ವೈದ್ಯರ ಕೊರತೆ ಇಲ್ಲ. ಇನ್ನಷ್ಟು ಆರೋಗ್ಯ ಮೂಲಸೌಕರ್ಯಕ್ಕೆ ಭೂಮಿ ಮೀಸಲಿಟ್ಟಿದ್ದು, ಅಲ್ಲಿ ಅಭಿವೃದ್ಧಿ ಕಾರ್ಯದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos