ಕೋಲಾರ ಟಿಕೆಟ್​ ಹಂಚಿಕೆ ಗೊಂದಲ: ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ

ಕೋಲಾರ ಟಿಕೆಟ್​ ಹಂಚಿಕೆ ಗೊಂದಲ: ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಾಳೆಯದಲ್ಲಿ ಕೋಲಾರ ಕಾಳಗದ ಕೋಲಾಹಲ ಎದ್ದಿದೆ. ಟಿಕೆಟ್ ಘೋಷಣೆ ಆಗ್ಬೇಕಿರೋ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವಿನ ಗುದ್ದಾಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿ ಅವರ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯನ್ನು ಹಮ್ಮಿಕೊಂಡಿದ್ದರು.

ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ವಿವಾದ ಕುರಿತು ಸಚಿವ ಕೆ.ಹೆಚ್.ಮುನಿಯಪ್ಪ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.‌ ಗುರುವಾರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಕೆ.ಹೆಚ್.ಮುನಿಯಪ್ಪ, ಟಿಕೆಟ್ ವಿಚಾರವಾಗಿ ಸಚಿವರು ಸೇರಿ ಕೋಲಾರ ಶಾಸಕರ ರಾಜೀನಾಮೆ ಪ್ರಹಸನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹೈಕಮಾಂಡ್ ತಮ್ಮ ಅಳಿಯನಿಗೆ ಟಕೆಟ್ ಕೊಡಲು ಒಲವು ತೋರಿದ್ದರೂ, ಅದರ ವಿರುದ್ಧ ಕೋಲಾರ ಶಾಸಕರು ರಾಜೀನಾಮೆ ನಾಟಕವಾಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

ನನ್ನ ಅಳಿಯನಿಗೆ ಟಿಕೆಟ್ ನೀಡಿದರೆ ಗೆಲ್ಲಿಸುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುನಿಯಪ್ಪ ಹೇಳಿದರು. ಇದಕ್ಕೆ ಸಿಎಂ ಹಾಗೂ ಡಿಸಿಎಂ ಪ್ರತಿಕ್ರಿಯಿಸಿ, ಹೈಕಮಾಂಡ್‌ಗೆ ಸೂಕ್ತ ಅಭ್ಯರ್ಥಿಯನ್ನು ಶಿಫಾರಸು ಮಾಡುವುದಾಗಿ ತಿಳಿಸಿದರು. ಸಿಎಂ, ಡಿಸಿಎಂ‌ ಮಾತಿಗೆ ಸಹಮತ ವ್ಯಕ್ತಪಡಿಸಿ ಮುನಿಯಪ್ಪ ತೆರಳಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಮುನಿಯಪ್ಪ, ಪಕ್ಷದ ವರಿಷ್ಟರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ. ಶಾಸಕರ ಸಭೆಗೆ ಸಿಎಂ, ಡಿಸಿಎಂ ನನ್ನನ್ನು ಕರೆದಿರಲಿಲ್ಲ.‌ ಸಂಧಾನ ಸಭೆ ಯಶಸ್ವಿಯಾಗಿದೆ ಅನ್ನುತ್ತಿದ್ದಾರೆ. ಕೋಲಾರ ಶಾಸಕರ ಜೊತೆಗಿನ ಸಂಧಾನ ಸಭೆಯಲ್ಲಿ ಹೈಕಮಾಂಡ್ ಹೇಳಿದ ಅಭ್ಯರ್ಥಿ ಪರ ಕೆಲಸ ಮಾಡುವ ಬಗ್ಗೆ ತೀರ್ಮಾನವಾಗಿದೆ. ಒಳ್ಳೆಯ ಬೆಳವಣಿಗೆ ಆಗಿದೆ. ನನ್ನ ಅಭಿಪ್ರಾಯವನ್ನು ಮತ್ತೆ ಸಿಎಂಗೆ ಹೇಳುತ್ತೇನೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos