ನಾಳೆ ಸಿದ್ದು ನೇತೃತ್ವದಲ್ಲಿ ಸಭೆ!

ನಾಳೆ ಸಿದ್ದು ನೇತೃತ್ವದಲ್ಲಿ ಸಭೆ!

ಬೆಂಗಳೂರು, ಸೆ. 17: ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ಆರಂಭಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ನಾಳೆ ರಾಜ್ಯ ಕಾಂಗ್ರೆಸ್ ಶಾಸಕರ ಶಾಸಕಾಂಗ ಸಭೆ ಕರೆದಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದ್ದು, ಸಭೆಗೆ ಪಾಲ್ಗೊಳ್ಳುವಂತೆ ಪಕ್ಷದ ಶಾಸಕರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸಭೆಯಲ್ಲಿ ಪ್ರತಿಪಕ್ಷದ ಆಯ್ಕೆ ಕುರಿತಂತೆ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸುವದರ ಜೊತೆಗೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos