ಮೇಲ್ಸೆತುವೆಗೆ ಸಿದ್ಧಗಂಗಾಶ್ರೀಗಳ ಹೆಸರು

ಮೇಲ್ಸೆತುವೆಗೆ ಸಿದ್ಧಗಂಗಾಶ್ರೀಗಳ ಹೆಸರು

ಬೆಂಗಳೂರು, ಸೆ. 20 : ಬೆಂಗಳೂರಿನಲ್ಲಿ ಮೇಲುಸೇತುವೆಗೆ ಶ್ರೀ ಶಿವಕುಮಾರಸ್ವಾಮೀಜಿ ಅವರ ಹೆಸರು ನಾಮಕರಣ ಮಾಡುತ್ತಿರುವುದು ಇದೇ ಮೊದಲು. ನಗರದ ಗೊರಗುಂಟೆ ಪಾಳ್ಯದ ಮೇಲುಸೇತುವೆಗೆ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ನಾಳೆ ನಡೆಯಲಿದೆ. ಅಂದು ಸಂಜೆ 5.30ಕ್ಕೆ ಸಿದ್ಧಗಂಗಾಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಡಿ.ವಿ.ಸದಾನಂದಗೌಡ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಭಾಗವಹಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos