ಲೋಕಸಭಾ ಚುನಾವಣೆ: ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ

 ಲೋಕಸಭಾ ಚುನಾವಣೆ: ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಲೋಕಾಸಭೆ ಚುನಾವಣೆ ರಾಜ್ಯದೆಲ್ಲಡೆ ಇನ್ನೇರಡು ದಿನಗಳು ಬಾಕಿ ಉಳಿದಿದ್ದು, ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಲ್ಲಿ ಏ.26ರ ಶುಕ್ರವಾರ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು ಮಧ್ಯರಾತ್ರಿ 11.55ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ಬಿಎಂಆರ್‌ಸಿಎಲ್‌ ವತಿಯಿಂದ ಮಾಹಿತಿ ನೀಡಲಾಗಿದೆ.

ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 26.04.2024 ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ ಚಲ್ಲಘಟ್ಟ, ವೈಟ್ ಫೀಲ್ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 3.55 ಕ್ಕೆ (11.55pm) ವಿಸ್ತರಿಸಲಾಗಿದೆ ಎಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos