ಬೆಂಗಳೂರಿನಲ್ಲಿ IPL ಪಂದ್ಯ ಈ ನಾಲ್ಕು ದಿನ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಬೆಂಗಳೂರಿನಲ್ಲಿ IPL ಪಂದ್ಯ ಈ ನಾಲ್ಕು ದಿನ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಪ್ರೀಮಿಯಲ್ಲಿ ಎಂದರೆ ಅದು ನಮ್ಮ ಐಪಿಎಲ್ ಆರಂಭವಾಗಿ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಾಣ ಶುರುವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿಗಳು ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಮ್ಮ ಮೆಟ್ರೋ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. BMRCL ನಮ್ಮ ಮೆಟ್ರೋ ಸೇವೆಯಲ್ಲಿ ಬದಲಾಣೆಗಳು ಮಾಡಿ ಸೇವೆ ವಿಸ್ತರಣೆ ಮಾಡಿವೆ

ಬೆಂಗಳೂರಿನ ಹೆಚ್ಚಿನ ಸ್ವಾಮಿ ಕ್ರೀಡಾಂಗಣದಲ್ಲಿ ಅದರಂತೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ. ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ.

ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ 2 ಗಂಟೆಯಿಂದ ಎಲ್ಲಾ ನಿಲ್ದಾಣಗಳಲ್ಲಿ 50 ರೂಪಾಯಿ ಪೇಪರ್ ಟಿಕೆಟ್ ಸಿಗಲಿದೆ. QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್​ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು.

ವಾಟ್ಸ್ ಆಪ್, ನಮ್ಮ ಮೆಟ್ರೋ ಆ್ಯಪ್, ಪೇಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ನಮ್ಮ ಮೆಟ್ರೋ ಸೂಚಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos