ಮೇವಿನ ಕೊರತೆ: ನಾಡಕಚೇರಿಗೆ ಮುತ್ತಿಗೆ ಹಾಕಿ ರೈತರ ಪ್ರತಿಭಟನೆ

ಮೇವಿನ ಕೊರತೆ: ನಾಡಕಚೇರಿಗೆ ಮುತ್ತಿಗೆ ಹಾಕಿ ರೈತರ ಪ್ರತಿಭಟನೆ

ಚಿತ್ರದುರ್ಗ, ಮೇ.13, ನ್ಯೂಸ್ ಎಕ್ಸ್ ಪ್ರೆಸ್: ಚಿತ್ರದುರ್ಗ ತಾಲ್ಲೂಕಿನ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತುರುವನೂರು ನಾಡಕಚೇರಿಯಲ್ಲಿ ಜಾನುವಾರುಗಳಿಗೆ ಮೇವನ್ನು ಒದಗಿಸಲಾಗದ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ರೈತರು, ನಾಡಕಚೇರಿಗೆ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಚಿತ್ರದುರ್ಗ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳ ಜಾನುವಾರುಗಳಿಗೆ ಮೇವನ್ನು ಒದಗಿಸಲು ವಿಫಲರಾಗಿದ್ದರು. ಈ ಹಿನ್ನಲೆಯಲ್ಲಿ ಇಂದು ಜಾನುವಾರಗುಳ ಸಮೇತ ನಾಡಕಚೇರಿಗೆ ಮುತ್ತಿಗೆ ಹಾಕಿದ ರೈತರು, ನಾಡಕಚೇರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ರೈತರು, ನಾವು ಜಿಲ್ಲಾಡಳಿತಕ್ಕೆ ಸಾಕಷ್ಟು ಬಾರಿ ಜಾನುವಾರುಗಳಿಗೆ ಮೇವು ಒದಗಿಸುವಂತೆ ಮನವಿ ಮಾಡಲಾಗಿದೆ. ಅಧಿಕಾರಿಗಳು ಕ್ಯಾರೇ ಎನ್ನಲಿಲ್ಲ. ಹೀಗಾಗಿ ಜಿಲ್ಲಾಢಳಿತ ಹಾಗೂ ಜನಪ್ರತಿನಿಧಿಗಳ ವಿರುಧ್ದ ನಾಡಕಚೇರಿ ಬಂದ್ ಮಾಡಿ, ಪ್ರತಿಭಟನೆ ಮಾಡುವ ಮೂಲಕ ಬಿಸಿ ಮುಟ್ಟಿಸುತ್ತಿದ್ದೇವೆ ಎಂದು ರೈತರು ಹೇಳಿದರು

ಫ್ರೆಶ್ ನ್ಯೂಸ್

Latest Posts

Featured Videos