CSK ಅಬ್ಬರಕ್ಕೆ MI ಬ್ಯಾಟರ್‌ ತತ್ತರ

CSK ಅಬ್ಬರಕ್ಕೆ MI ಬ್ಯಾಟರ್‌ ತತ್ತರ

ಬೆಂಗಳೂರು: ನಿನ್ನೆ ನಡೆದ ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 29ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್‌ಗಳ ರೋಚಕ ಗೆಲುವು ದಾಖಲಿಸಿದೆ.

‌ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉತ್ತಮ ಆರಂಭ ಪಡೆಯಲಿಲ್ಲಾ. ನಂತರ ಜೊತೆಗೂಡಿದ ರುತುರಾಜ್ ಗಾಯಕ್ವಾಡ್ ಮತ್ತು ಶಿವಂ ದುಬೆ ಜೊತೆಗೂಡಿ ದೊಡ್ಡ ಮೊತ್ತ ಕಲೆಹಾಕಲು ನೆರವಾದರು. ಈ ಜೋಡಿ ಮೂರನೇ ವಿಕೆಟ್‌ಗೆ 90 ರನ್‌ಗಳ ಜೊತೆಯಾಟ ನಿರ್ಮಿಸಿದರು. ನಾಯಕ ರುತುರಾಜ್ ಗಾಯಕ್ವಾಡ್ 40 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 69 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಶಿವಂ ದುಬೆ ಎಂದಿನಂತೆ ತಮ್ಮ ಅಬ್ಬರದ ಬ್ಯಾಟಿಂಗ್ ಮಾಡಿದರು ಮತ್ತು 38 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ ಅಜೇಯ 66 ರನ್ ಬಾರಿಸಿದರು. ಇನ್ನು ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಮಾಜಿ ನಾಯಕ ಎಂಎಸ್ ಧೋನಿ, ಕಿಕ್ಕಿರಿದು ತುಂಬಿದ್ದ ವಾಂಖೆಡೆಯಲ್ಲಿ ಪ್ರೇಕ್ಷಕರಿಗೆ ರಸದೌತಣ ಬಡಿಸಿದರು. ತಮ್ಮನ್ನು ನೋಡಲು ಬಂದಿದ್ದ ಅಭಿಮಾನಿಗಳನ್ನು ನಿರಾಸೆಗೊಳಿಸಲಿಲ್ಲ. ಎಂಎಸ್ ಧೋನಿ ಕೊನೆಯ 4 ಎಸೆತಗಳು ಬಾಕಿ ಇದ್ದಾಗ ಕ್ರೀಸ್‌ಗೆ ಬಂದರು ಮತ್ತು ಹಾರ್ದಿಕ್ ಪಾಂಡ್ಯ ಅವರ ಬೌಲಿಂಗ್‌ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸಿದರು. ಕೇವಲ 4 ಎಸೆತಗಳಲ್ಲಿ 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 20 ರನ್ ಗಳಿಸಿದರು.  ಮನಮೋಹಕ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು.

207 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ಹೊರತಾಗಿಯೂ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್ ಗಳಿಸುವ ಮೂಲಕ 20 ರನ್‌ಗಳ ಸೋಲು ಅನುಭವಿಸಿತು.

ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 70 ರನ್‌ಗಳ ಜೊತೆಯಾಟ ನೀಡಿದರು. ತಿಲಕ್ ವರ್ಮಾ 20 ಎಸೆತಗಳಲ್ಲಿ 5 ಬೌಂಡರಿ ಮೂಲಕ 31 ರನ್ ಗಳಿಸಿದರು. ರೋಹಿತ್ ಶರ್ಮಾ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಸಮೇತ ಅಜೇಯ 105 ರನ್ ಗಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos