SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ

SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ

ಬೆಂಗಳೂರು: ಇದು ಪರೀಕ್ಷೆಯ ಸಮಯದಲ್ಲಿ ಹೊರಗೆ ಬಂದರೆ ಬಿಸಿಲಿನ ತಾಪ ಮೈಸುಡುತ್ತಿದೆ ಅದರ ಜೊತೆಗೆ ಪರೀಕ್ಷೆ ಎಂಬ ಭಯವು ಮಕ್ಕಳಲ್ಲಿ ಆವರಿಸಿದೆ ಇದೆ ವೇಳೆ ಸರ್ಕಾರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಮಾನವೀಯ ದೃಷ್ಟಿಯಿಂದ ಯೋಚನೆ ಮಾಡಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿದ್ದು ಸೋಮವಾರದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ ಮಾರ್ಚ್ 25 ರಿಂದ ಏಪ್ರಿಲ್6ರ ತನಕ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ.

ಈ ಹಿನ್ನಲೆ ಪರೀಕ್ಷೆಗಳಿಗೆ ಹಾಜರಾಗುತ್ತಿರುವ ಎಲ್ಲಾ ಮಕ್ಕಳಿಗೆ ಬಿಸಿಯುಟದ ವ್ಯವಸ್ಥೆ ಮಾಡಲು ಸರ್ಕಾರ ಸೂಚನೆ ನೀಡಿದೆ ಪರೀಕ್ಷೆ ಮುಗಿಯುವ ತನಕ ಎಲ್ಲಾ ಶಾಲೆಗಳಲ್ಲಿ ಬಿಸಿ ಊಟದ ವ್ಯವಸ್ಥೆ ಮಾಡಿ ಮಕ್ಕಳಿಗೆ ನೀಡಿ ಸೂಚನೆ ನೀಡಿದೆ.

ಎಸ್‌ಎಸ್ಎಲ್‌ಸಿ ಪರೀಕ್ಷೆ ಹಿನ್ನಲೆಯಲ್ಲಿ ಬಿ. ಬಿ. ಕಾವೇರಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಈ ಸುತ್ತೋಲೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪಿಎಂ ಪೋಷಣ್ ಮಧ್ಯಾಹ್ನ ಉಪಾಹಾರ ಯೋಜನೆಯ ಅನುಷ್ಠಾನದ ವ್ಯಾಪ್ತಿಯಲ್ಲಿ ಅಡುಗೆ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರಗಳಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.

ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಮಲ್ಲೇಶ್ವರಂ ಬೆಂಗಳೂರು ಇವರ ಸುತ್ತೋಲೆಯನ್ನು ಉಲ್ಲೇಖಿಸಲಾಗಿದೆ. ಬಿಸಿಯೂಟ ನೀಡುವಾಗ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಸಹ ಸುತ್ತೋಲೆಯಲ್ಲಿ ನೀಡಲಾಗಿದೆ.

ಸದರಿ ವಾರ್ಷಿಕ ಕಾರ್ಯಕ್ರಮದಡಿ ಅಡುಗೆ ಕೇಂದ್ರಗಳಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ SSLC ಪಬ್ಲಿಕ್ ಪರೀಕ್ಷೆಗಳು ದಿನಾಂಕ 25/03/2024 ರಿಂದ ಪ್ರಾರಂಭಗೊಂಡು ದಿನಾಂಕ 6/4/2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶಿಸಿದೆ ಎಂದು ಹೇಳಿದೆ.

* ಅಡುಗೆ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರಗಳಲ್ಲಿ 1167 ಸರ್ಕಾರಿ ಮತ್ತು 884 ಅನುದಾನಿತ ಶಾಲೆಗಳ ಮಧ್ಯಾಹ್ನ ಬಿಸಿಯೂಟ ಸ್ವೀಕರಿಸಲು ಅಪೇಕ್ಷಿಸಿರುವ ಹಾಗೂ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಹಾಜರಾತಿ ಸಂಖ್ಯೆಗೆ ಅನುಗುಣವಾಗಿ ಬಿಸಿಯೂಟ ಸಿದ್ಧಪಡಿಸಿ ವಿತರಿಸುವಂತೆ ಸೂಚಿಸಿದೆ.

* ಪರೀಕ್ಷಾ ಕೇಂದ್ರಗಳಿರುವ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಅಡುಗೆ ತಯಾರಿಕೆ ಮತ್ತು ಬಡಿಸುವ ನಿರ್ವಹಣೆಗೆ ಅಡುಗೆ ಸಿಬ್ಬಂದಿಯನ್ನು ಹಾಗೂ ಮೇಲ್ವಿಚಾರಕರಾಗಿ ವಿಷಯ ಬೋಧಕರಲ್ಲದ ಶಿಕ್ಷಕರಾದ ದೈಹಿಕ ಶಿಕ್ಷಣ ಶಿಕ್ಷಕರು, ವೃತ್ತಿ ಶಿಕ್ಷಕರು ಇದ್ದಲ್ಲಿ ಒಬ್ಬರನ್ನು ನಿಯೋಜಿಸಿ ಯಾವುದೇ ಆರೋಪಗಳಿಗೆ ಅವಕಾಶ ನೀಡದಂತೆ ವಿರ್ವಹಿಸಲು ಸೂಚಿಸಿದೆ.

* ಏಪ್ರಿಲ್ 10ರ ವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿಯೂ ಸಹ 1-10ನೇ ತರಗತಿಯವರೆಗೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ತಪ್ಪದೇ ಪೂರೈಸುವುದು.

* ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದರೊಂದಿಗೆ,ಸುರಕ್ಷಿತವಾಗಿ ಶುಚಿ-ರುಚಿಯಾಗಿ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವುದು ಹಾಗೂ ಶಾಲಾ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ, ಬಿಸಿಯೂಟ ಆಹಾರದ ಉತ್ತಮ ಗುಣಮಟ್ಟ, ಸ್ವಚ್ಛತೆ ಮತ್ತು ನೈರ್ಮಲ್ಯ ಈ ಅಂಶಗಳಿಗೆ ಶಾಲಾ ಮುಖ್ಯಸ್ಥರು, ನಿರ್ವಾಹಕರು ಹಾಗೂ ಅಡುಗೆ ಸಿಬ್ಬಂದಿಯವರು ಪಥಮ ಆದ್ಯತೆ ನೀಡಿ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸುವುದು. ಈ ಕುರಿತು ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರಿಗೆ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಹಂತದ ಇಲಾಖೆಯ ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಹಾಗೂ ಪಿಎಂ ಪೋಷಣ್ ಅಧಿಕಾರಿಗಳಿಗೆ ಈ ಮೂಲಕ ಸೂಚಿಸಿದೆ ಎಂದು ಸುತ್ತೋಲೆ ಹೇಳಿದೆ.

 

ಫ್ರೆಶ್ ನ್ಯೂಸ್

Latest Posts

Featured Videos