ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಐಪಿಎಲ್ ಆರಂಭ

ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಐಪಿಎಲ್ ಆರಂಭ

ಬೆಂಗಳೂರು: ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಬಹು ನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಯಾವಾಗ ಶುರುವಾಗಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಲಭಿಸಿದೆ. ಟೂರ್ನಿ ಮಾರ್ಚ್‌ 22ರಂದು ಆರಂಭಗೊಳ್ಳುವುದಾಗಿ ಸ್ವತಃ ಐಪಿಎಲ್‌ ಮುಖ್ಯಸ್ಥ ಅರುಣ್‌ ಧುಮಾಲ್‌ ಮಾಹಿತಿ ನೀಡಿದ್ದಾರೆ. ಅಲ್ಲದೆ ಲೋಕಸಭೆ ಚುನಾವಣೆ ಇದ್ದರೂ ಟೂರ್ನಿಯನ್ನು ಬೇರೆ ದೇಶಕ್ಕೆ ಸ್ಥಳಾಂತರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಾರ್ಚ್ 22 ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮೊದಲ ಹಂತದಲ್ಲಿ 15 ದಿನಗಳವರೆಗಿನ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲು ಬಿಸಿಸಿಐ ನಿರ್ಧರಿಸಿದೆ.

ಇದಕ್ಕೆ ಮುಖ್ಯ ಕಾರಣ ಮುಂಬರುವ ಲೋಕಸಭಾ ಚುನಾವಣೆ. ಈ ಬಾರಿಯ ಐಪಿಎಲ್ ಮತ್ತು ಲೋಕಸಭಾ ಚುನಾವಣೆ ಏಕಕಾಲಕ್ಕೆ ನಡೆಯುವುದರಿಂದ ಸುರಕ್ಷತಾ ಸಮಸ್ಯೆಗಳು ತಲೆದೂರುವ ಸಾಧ್ಯತೆಯಿದೆ. ಹೀಗಾಗಿ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಉಳಿದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲು ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos