ರಾಜ್ಯದಲ್ಲಿ ರಸ ಗೊಬ್ಬರ ಸಂಗ್ರಹ: ಸಚಿವ ಬಿ.ಸಿ. ಪಾಟೀಲ್

ರಾಜ್ಯದಲ್ಲಿ ರಸ ಗೊಬ್ಬರ ಸಂಗ್ರಹ: ಸಚಿವ ಬಿ.ಸಿ. ಪಾಟೀಲ್

ತುಮಕೂರು : ರಾಜ್ಯದಲ್ಲಿ 14,650 ಮೆಟ್ರಿಕ್ ಟನ್ ರಸಗೊಬ್ಬರ ಸಂಗ್ರಹವಿದ್ದು, ಸದ್ಯದ ಮಟ್ಟಿಗೆ ಯಾವುದೇ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಪೂರಕವಾಗಿ ಬೇಕಾಗಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸರಬರಾಜಿನ ಮಾಹಿತಿ ಪಡೆಯಲು ಜಿಲ್ಲಾ ಪಂಚಾಯಿತಿಯಲ್ಲಿ ಆಯೋಜಿಸಲಾಗಿದ್ದ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರೈತರು ಬಹು ಬೆಳೆಗಳನ್ನು ಬೆಳೆಯಬೇಕಿದೆ.ಇದರಿಂದ ಅವರ ಆರ್ಧಿಕ ಪರಿಸ್ಥಿತಿ ಸುಧಾರಣೆ ಆಗಲಿದೆ ಎಂದು ಸೂಚನೆ ನೀಡಿದರು.

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಮಾರಾಟ ಮಾಡುವ ವೇಳೆ ಕೃತಕ ಅಭಾವ ಸೃಷ್ಟಿಸಿದರೆ ಅಂತಹವರ ಮೇಲೆ ಪ್ರಕರಣ ದಾಖಲಿಸಿ, ಅವರ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದುuಟಿಜeಜಿiಟಿeಜ ಎಚ್ಚರಿಕೆ ನೀಡಿದರು.

ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಬಿತ್ತನೆ ಬೀಜ, ಗೊಬ್ಬರ ಖರೀದಿಗೆ ಅವಕಾಶ ನೀಡಲಾಗಿದೆ. ಅನಾಮಧೇಯ ಬಿತ್ತನೆ ಬೀಜದ ಪ್ಯಾಕೆಟ್ ಗಳು ಕೊರಿಯರ್ ಗಳಲ್ಲಿ ಬಂದ್ರೆ ಅದನ್ನು ಬಳಸದಂತೆ ರೈತರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.

ಸಿರಿಧಾನ್ಯಗಳ ಬಳಕೆ ಹೆಚ್ಚುತ್ತಿರುವುದರಿಂದ, ಬೇಡಿಕೆ ಯಥೇಚ್ಚವಾಗಿದೆ. ಹೀಗಾಗಿ ರೈತರಿಗೂ ಸಿರಿಧಾನ್ಯಗಳನ್ನು ಬೆಳೆದು ಹೆಚ್ಚಿನ ಲಾಭ ಪಡೆಯಬಹುದಾಗಿದೆ ಎಂದು ಜಾಗೃತಿ ಮೂಡಿಸಲಾಗುತ್ತಿದೆ. ರೈತರು ಕೂಡ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಪಕ್ಷದ ಬೆಳವಣಿಗೆಗಳ ಕುರಿತು ಯಾವುದೇ ರೀತಿಯ ಚರ್ಚೆ ಮಾಡುವುದು ಸೂಕ್ತ ಅಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸೂಚನೆಗೆ ಬದ್ಧನಾಗಿದ್ದೇನೆ. ಅದು ಪ್ರಸ್ತುತ ಮುಗಿದ ಅಧ್ಯಾಯವಾಗಿದೆ. ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ರೈತ ಮಿತ್ರ ಯೋಜನೆ ಪ್ರಸ್ತುತ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos