ತುಮಕೂರು, ಆ. 17: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ವಸತಿ ಶಾಲೆ ವಿದ್ಯಾರ್ಥಿ ನಾಪತ್ತೆಯಾಗಿದ್ದು, ದೂರು ದಾಖಲಾಗಿದೆ.
8ನೇ ತರಗತಿ ಓದುತ್ತಿದ್ದ 13 ವರ್ಷದ ನವಪ್ರಜ್ವಲ್ ನಾಪತ್ತೆಯಾಗಿರುವ ವಿದ್ಯಾರ್ಥಿ ಎಂದು ಹೇಳಲಾಗಿದೆ. ಆಗಸ್ಟ್ 15 ರಿಂದ ನವಪ್ರಜ್ವಲ್ ನಾಪತ್ತೆಯಾಗಿದ್ದು, ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ ಎನ್ನಲಾಗಿದೆ.
ಹುಲಿಯೂರು ದುರ್ಗ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನಾಪತ್ತೆಯಾಗಿರುವ ವಿದ್ಯಾರ್ಥಿಗಾಗಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.