ಬೆಂಗಳೂರು: ಪಕ್ಷದ ಶಿಸ್ತನ್ನು ಉಲ್ಲಂಘಿಸುವ ಹಾಗೆ ಮಾತನಾಡಿದ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ಗೆ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿರುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು, ಶಾಸಕ ಸೋಮಶೇಖರ್ ಹೇಳಿಕೆ ಸ್ಪಷ್ಟನೆ ಕೋರಿ ಶೋಕಾಸ್ ನೋಟಿಸ್ ನೀಡುವಂತೆ ದಿನೇಶ್ ಗುಂಡೂರಾವ್ಗೆ ಸೂಚಿಸಿದ್ದೇನೆ. ಉತ್ತರ ಅಸಮರ್ಪಕವಾಗಿದ್ರೆ ಸೋಮಶೇಖರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಪಕ್ಷದ ಅಶಿಸ್ತನ್ನ ಪಕ್ಷ ಸಹಿಸಲ್ಲ ಎಂದು ಹೇಳಿದ್ದಾರೆ.