ನಮ್ಮಿಂದ ತಪ್ಪಾಗಿದೆ.. ಪ್ಲೀಸ್ ಬಿಟ್ಟು ಬಿಡಿ: ಬಿಜೆಪಿ ಶಾಸಕ ಮಾಧುಸ್ವಾಮಿಯಿಂದ ಸ್ಪೀಕರ್ ಗೆ ಮನವಿ

ನಮ್ಮಿಂದ ತಪ್ಪಾಗಿದೆ.. ಪ್ಲೀಸ್ ಬಿಟ್ಟು ಬಿಡಿ: ಬಿಜೆಪಿ ಶಾಸಕ ಮಾಧುಸ್ವಾಮಿಯಿಂದ ಸ್ಪೀಕರ್ ಗೆ ಮನವಿ

ಬೆಂಗಳೂರು: ನಮ್ಮಿಂದ ತಪ್ಪಾಗಿದೆ. ಪ್ಲೀಸ್ ಬಿಟ್ಟುಬಿಡಿ. ಎಸ್‍ಐಟಿ ತನಿಖೆ ಬೇಡವೇ ಬೇಡ ಎಂದು ಹೇಳುವ ಮೂಲಕ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ನಾಯಕರು ಪದೇ ಪದೇ ತಪ್ಪಾಗಿದೆ ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಅವರು ಇಂದು ವಿಧಾಸಭಾ ಕಲಾಪದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿದೆ ಎನ್ನಲಾದ ಆಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದರು.

ಇದೇ ವೇಳೆ ಅವರು ಮಾತನಾಡುತ್ತ ನಿಮ್ಮ ಗೆಳೆಯನಾಗಿ ನಾನು ವಿನಂತಿ ಮಾಡುತ್ತೇನೆ. ನಿಮ್ಮ ಹಿತೈಷಿಯಾಗಿ ಹೇಳುತ್ತಿದ್ದೇನೆ. ದಯಮಾಡಿ ನಿಲ್ಲಿಸಿ. ನಮ್ಮ ತಪ್ಪಾಗಿದೆ ಎಂದು ಒಪ್ಪಿಕೊಳ್ಳುತ್ತೇವೆ.

ಹೀಗಾಗಿ ತಮ್ಮ ನಿರ್ಧಾರ ಮರುಪರಿಶೀಲಿಸಿ ಎಂದು ಮಾಧುಸ್ವಾಮಿ ಹೇಳಿದ್ದಾರೆ. ಇನ್ನು ಇದೇ ವೇಳೆ ಅವರು ವಿಶೇಷ ತನಿಖಾ ತಂಡ(ಎಸ್‍ಐಟಿ) ತನಿಖೆಗೆ ಒಪ್ಪಿಸಬೇಡಿ. ನಮ್ಮಿಂದ ತಪ್ಪಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಸ್ಪೀಕರ‍್ ಬಳಿ ಮನವಿ ಮಾಡಿಕೊಂಡರು.

ಫ್ರೆಶ್ ನ್ಯೂಸ್

Latest Posts

Featured Videos