ದ.ಕ.: ದೋಸ್ತಿ ಅಭ್ಯರ್ಥಿಯಾಗಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

ದ.ಕ.: ದೋಸ್ತಿ ಅಭ್ಯರ್ಥಿಯಾಗಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

ಮಂಗಳೂರು, ಮಾ.25, ನ್ಯೂಸ್ ಎಕ್ಸ್ ಪ್ರೆಸ್: ದ.ಕ.ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ನ ದೋಸ್ತಿ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಅವರು ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ನಗರದ ಪುರಭವನದ ಬಳಿ ಆಯೋಜಿಸಿದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾದ ಮಿಥುನ್ ರೈ ಅವರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ಜನಾರ್ಧನ ಪೂಜಾರಿ, ರಮಾನಾಥ ರೈ, ಯು.ಟಿ.ಖಾದರ್, ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ ಸಾಥ್ ನೀಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos