ಮಲೆನಾಡಲ್ಲಿ ಮುಂಗಾರು

 ಮಲೆನಾಡಲ್ಲಿ ಮುಂಗಾರು

ಚಿಕ್ಕಮಗಳೂರು, ಜು. 27 : ಕೆಲವು ದಿನಗಳ ಹಿಂದೆ ಬಿಡುವು ನೀಡಿದ್ದ ಮುಂಗಾರು ಮಳೆ ಮಲೆನಾಡಿನಲ್ಲಿ ಚುರುಕುಗೊಂಡಿತ್ತು. ಗುರುವಾರ ರಾತ್ರಿಯಿಂದಲೇ ಆರಂಭವಾದ ಮಳೆ ಶುಕ್ರವಾರ ಮಲೆನಾಡಿನ ಹಲವೆಡೆ ನಿರಂತರವಾಗಿ ಸುರಿಯಿತು.

ಮೂಡಿಗೆರೆ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ ತಾಲೂಕುಗಳಲ್ಲಿ  ರಾತ್ರಿಯಿಂದಲೇ ಉತ್ತಮ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳ ನೀರಿನ ಮಟ್ಟದಲ್ಲಿ ಸ್ವಲ್ಪಮಟ್ಟಿಗೆ ಏರಿಕೆ ಕಂಡುಬಂದಿದೆ. ಮುಂದಿನ 24 ಗಂಟೆಗಳಲ್ಲಿ ಈ ನದಿಗಳ ಜಲಾಶಯಗಳಲ್ಲಿ ನೀರಿನ ಒಳ ಹರಿವು ಹೆಚ್ಚಾಗಲಿದೆ.

ಬೆಳಗ್ಗೆಯಿಂದ ಮಳೆ:

ಶೃಂಗೇರಿ ತಾಲೂಕಿನಾದ್ಯಂತ ಬಿಡುವಿಲ್ಲದೇ ಮಳೆ ಸುರಿಯುತ್ತಿದೆ. ಕೊಪ್ಪ ತಾಲೂಕಿನಲ್ಲಿ ಬೆಳಗ್ಗೆಯಿಂದ ಮಳೆ ಸುರಿದಿದ್ದು, ಮಧ್ಯಾಹ್ನದ ವೇಳೆಗೆ ಸ್ವಲ್ಪ ಬಿಡುವು ಕೊಟ್ಟಿತ್ತಾದರೂ ಮೋಡ ಕವಿದ ವಾತಾವರಣ ಮುಂದುವರಿದಿತ್ತು. ಮೂಡಿಗೆರೆ ಮತ್ತು ನರಸಿಂಹರಾಜಪುರ ತಾಲೂಕುಗಳಲ್ಲೂ ಮಳೆ ಮತ್ತು ಮೋಡ ಮುಂದುವರಿದಿತ್ತು.

ಫ್ರೆಶ್ ನ್ಯೂಸ್

Latest Posts

Featured Videos