ಮೋದಿಗೆ ಅಭಿನಂದನೆ ಸಲ್ಲಿಸಿದ ಎಚ್ ಡಿಕೆ

ಮೋದಿಗೆ ಅಭಿನಂದನೆ ಸಲ್ಲಿಸಿದ ಎಚ್ ಡಿಕೆ

ಬೆಂಗಳೂರು, ಜ. 7 : ನೆರೆ ಪರಿಹಾರವಲ್ಲದೇ ರಾಜ್ಯಕ್ಕೆ ನ್ಯಾಯೋಚಿತವಾಗಿ ಬರಬೇಕಾದ ಅನುದಾನ ಸಾಕಷ್ಟಿದೆ. ತೆರಿಗೆ ಪಾಲು, ನರೇಗಾ ಅನುದಾನ, ಬರ ಪರಿಹಾರ.ಇವುಗಳನ್ನೆಲ್ಲ ಯಾವಾಗ ಕೊಡುತ್ತೀರಿ ಮೋದಿ ಅವರೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಅಳೆದು ತೂಗಿ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಕೊಟ್ಟಿದೆ. ಬಹುಶಃ ಶಿವಕುಮಾರ ಶ್ರೀಗಳು ಮೆಟ್ಟಿದ ಭೂಮಿ ಮೋದಿ ಅವರಿಗೆ ಜ್ಞಾನೋದಯ ಮಾಡಿಸಿರಬಹುದು. ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ, ಪ್ರಧಾನಿ ಮೋದಿ ಅವರಿಗೆ ಅಭಿನಂದನೆಗಳು. ಇದಾದ ಬಳಿಕ ನಂತರ ಟ್ವೀಟ್ ಮಾಡಿದ ಅವರು, ಕೇಂದ್ರ ಸರ್ಕಾರ ಅಳೆದು ತೂಗಿ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಕೊಟ್ಟಿದೆ. ಬಹುಶಃ ಶಿವಕುಮಾರ ಶ್ರೀಗಳು ಮೆಟ್ಟಿದ ಭೂಮಿ ಮೋದಿ ಅವರಿಗೆ ಜ್ಞಾನೋದಯ ಮಾಡಿಸಿರಬಹುದು. ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ, ಪ್ರಧಾನಿ ಮೋದಿ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos