ಇಂದು ಬಂಗಾಲಕ್ಕೆ ಮೋದಿ

ಇಂದು ಬಂಗಾಲಕ್ಕೆ ಮೋದಿ

ಕೋಲ್ಕತಾ, ಜ. : ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ರವಿವಾರ ಪ್ರಧಾನಿ ಮೋದಿ ಜತೆ ಕೋಲ್ಕತ್ತಾದಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ. ಕೋಲ್ಕತಾ ಪೋರ್ಟ್ ಟ್ರಸ್ಟ್ನ 150ನೇ ಸಮಾರಂಭದಲ್ಲಿ ಭಾಗವಹಿಸಲು ಮೋದಿ ಶನಿವಾರ ಕೋಲ್ಕತಾಗೆ ಬರಲಿದ್ದಾರೆ.
ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಹೊರಾಟಗಳು ನಡೆಯುತ್ತಿರುವ ಕಾರಣ ಅವರ ಭೇಟಿ ವೇಳೆ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆಗಳು ಇರುವುದರಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮೂರು ಸಂಘಟನೆಗಳು ವಿಮಾನ ನಿಲ್ದಾಣ ಮತ್ತು ರಸ್ತೆಯ ಬದಿಗಳಲ್ಲಿ ಪ್ರಧಾನಿಗೆ ಕಪ್ಪು ಬಾವುಟ ಪ್ರದರ್ಶಿಸುವ ಸಂಭವವಿದೆ ಎಂದು ಗುಪ್ತಚರ ಇಲಾಖೆ ಸರಕಾರಕ್ಕೆ ವರದಿ ನೀಡಿದೆ.

ಫ್ರೆಶ್ ನ್ಯೂಸ್

Latest Posts

Featured Videos