ಮೋದಿ ಹೆಸರಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಮತ ಕೇಳುತ್ತಿದ್ದಾರೆ: ಆರ್.ವಿ ದೇಶಪಾಂಡೆ

ಮೋದಿ ಹೆಸರಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಮತ ಕೇಳುತ್ತಿದ್ದಾರೆ: ಆರ್.ವಿ ದೇಶಪಾಂಡೆ

ಹುಬ್ಬಳ್ಳಿ, ಏ. 15, ನ್ಯೂಸ್ ಎಕ್ಸ್ ಪ್ರೆಸ್:  ಲೋಕಸಭಾ ಚುನಾವಣೆಯ ಕುರಿತು ಉತ್ತರ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳು ಸಾಧನೆಯ ಮೇಲೆ ಪ್ರಚಾರ ಮಾಡುತ್ತಿಲ್ಲ. ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ ದೇಶಪಾಂಡೆ  ಹೇಳಿದ್ದಾರೆ.

2014ರ ಚುನಾವಣೆಯಲ್ಲಿ ಬಿಜೆಪಿ ನೀಡಿದ ಮ್ಯಾನಿಫೆಸ್ಟ್ ಮರೆತು ಬಿಟ್ಟಿದೆ. ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರು ಮಾಡುದ ಸಾಧನೆ ಇಟ್ಟು ಪ್ರಚಾರ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡುವ ಗುರಿ ಇದೆ.

ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಾಗ ಮಾಡಿದ ಸಾಧನೆ ಜನರಿಗೆ ಮುಟ್ಟಿಸುತ್ತಿದ್ದೇವೆ. ದೇಶದಲ್ಲಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಎಲ್ಲ ವರ್ಗದ ರೈತರು ಅತಿವೃಷ್ಟಿ ಅನಾವೃಷ್ಟಿಯಿಂದ ತತ್ತರಿಸಿದ್ದಾರೆ ಎಂದು ಆರ್.ವಿ ದೇಶಪಾಂಡೆ ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos