ಬ್ರೆಸಿಲಿಯಾ, ನ. 15 : ಪ್ರಧಾನಿ ಮೋದಿ ಮತ್ತು ಭಾರತದ ಜನರ ಆತಿಥ್ಯೆ ಮರೆಯಲಾಗುವುದಿಲ್ಲ ಎಂದು ಚೆನ್ನೈಯಲ್ಲಿ ನಡೆದ ಭಾರತ – ಚೀನಾ ನಡುವಿನ ಎರಡನೇ ಅನೌಪಚಾರಿಕ ಸಭೆ ಕುರಿತು ಕ್ಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಚೀನಾದಲ್ಲಿ 2020ರಲ್ಲಿ ನಡೆಯಲಿರುವ ಮೂರನೇ ಅನೌಪಚಾರಿಕ ಸಭೆಗೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದರು.
ಚೀನಾದಲ್ಲಿ 2020ರಲ್ಲಿ ನಡೆಯಲಿರುವ ಮೂರನೇ ಅನೌಪಚಾರಿಕ ಸಭೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಚೀನಿ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಆಹ್ವಾನಿಸಿರುವುದು ಉಭಯ ದೇಶಗಳ ನಡುವಣ ಬಾಂಧವ್ಯ ಮತ್ತಷ್ಟು ಬಲವರ್ಧನೆಗೆ ನಾಂದಿಯಾಗಿದೆ.
ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳ ಒಕ್ಕೂಟ) ಸಮಾವೇಶದಲ್ಲಿ ಪ್ರಧಾನಮಂತ್ರಿ ಮೋದಿ ಮತ್ತು ಜಿನ್ ಪಿಂಗ್ ಭೇಟಿಯಾಗಿ ಮಾತುಕತೆ ನಡೆಸಿದರು.