ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಸಾಧ್ಯವಿಲ್ಲ: ಹೆಚ್.ಡಿ.ದೇವೇಗೌಡ

ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಸಾಧ್ಯವಿಲ್ಲ: ಹೆಚ್.ಡಿ.ದೇವೇಗೌಡ

ತುಮಕೂರು, ಏ. 10, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ನಾನು ಏನು ಅನ್ನೋದನ್ನ ಪ್ರಧಾನಿ ನರೇಂದ್ರ ಮೋದಿಗೆ ತೋರಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಚಾರದ ವೇಳೆ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಯಾವುದೇ ಗ್ರಾಮದಲ್ಲಿ ನೀರಿಲ್ಲ ಅಂತಾ ಹೇಳಬಾರದು. ಆ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ ಎಂದರು.

ದೇಶದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಸಾಧ್ಯವಿಲ್ಲ. ನನಗೂ ರಾಜಕಾರಣ ಗೊತ್ತಿದೆ. ಈ ರಾಜ್ಯದಲ್ಲಿ ನಾವು ಒಟ್ಟಾಗಿರೋದು ನೋಡಿ ಸಹಿಸಲು ಆಗುತ್ತಿಲ್ಲ. ಈ ಕ್ಷೇತ್ರದಲ್ಲಿ ಒಕ್ಕಲಿಗರನ್ನ ಗೆಲ್ಲಿಸಲ್ಲ ಅಂತಾರೆ. ಚಿಕ್ಕಮಗಳೂರಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಿಸಿಲ್ಲವೇ ಎಂದು ಪ್ರಶ್ನೆ ಮಾಡಿದರು. ನಮಗೂ ಕೂಡ ಕೈ ಕಾಲು ಆಡಿಸಿ ಮಾತನಾಡಲು ಬರುತ್ತದೆ ಅಂತಾ ಟೀಕೆ ಮಾಡೋರ ವಿರುದ್ಧ ಕಿಡಿ ಕಾರಿದರು.

ಫ್ರೆಶ್ ನ್ಯೂಸ್

Latest Posts

Featured Videos