ಮೋದಿ ಪ್ರಣಾಳಿಕೆಯಲ್ಲಿ ನೀಡಿದ್ದ ಒಂದು ಭರವಸೆಯೂ ಈಡೇರಿಲ್ಲ: ಎಚ್.ವಿಶ್ವನಾಥ್

ಮೋದಿ ಪ್ರಣಾಳಿಕೆಯಲ್ಲಿ ನೀಡಿದ್ದ ಒಂದು ಭರವಸೆಯೂ ಈಡೇರಿಲ್ಲ: ಎಚ್.ವಿಶ್ವನಾಥ್

ಹುಣಸೂರು, ಮಾ.29, ನ್ಯೂಸ್ ಎಕ್ಸ್ ಪ್ರೆಸ್:ಕಳೆದ ಐದು ವರ್ಷಗಳ ಹಿಂದೆ ಪೂರ್ಣ ಬಹುಮತ ಪಡೆದು ಅಧಿಕಾರಿಗೆ ಬಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನುಡಿದಂತೆ ನಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಸರ್ಕಾರ ಕಳೆದ 2014ರ ಪ್ರಣಾಳಿಕೆಯಲ್ಲಿ ಹೊರಡಿಸಿದ್ದ ಒಂದು ಭರವಸೆಯೂ ಈಡೇರಿಲ್ಲ ಆರೋಪಿಸಿದರು.

ಮೈಸೂರು ಮತ್ತು ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಅವರ ಪರವಾಗಿ ಏ.1 ಮತ್ತು 2 ರಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಸಚಿವರಾದ ಜಿ.ಟಿ.ದೇವೇಗೌಡ. ಸಾ.ರಾ.ಮಹೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ಮಹಾದೇವ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಮುಖಂಡರಾದ ಸೋಮಶೇಖರ್, ವೆಂಕಟೇಶ್ ಹಾಗೂ ಕಾರ್ಯಕರ್ತರು ಮತ ಯಾಚನೆ ಮಾಡಲಿದ್ದಾರೆ ಎಂದರು.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಯುವ ಜನರನ್ನು ಭಾವನಾತ್ಮಕವಾಗಿ ಸೆಳೆಯಲು ಸರ್ಜಿಕಲ್ ಸ್ಟ್ರೈಕನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ದೂರಿದರು.

ಯುಪಿಎ ಸರ್ಕಾರದ ಅವಧಿಯಲ್ಲೇ 70 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಲಾಗಿತ್ತು. ಅದೇ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅವಧಿಯಲ್ಲೂ 50 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿತ್ತು. ಈಗ ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು 42 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಲು ಪ್ರತಿಕ್ರಿಯೆ ಜಾರಿಯಲ್ಲಿದೆ ಎಂದರು.

ಮೈತ್ರಿ ಸರ್ಕಾರದ ಸಾಧನೆಯನ್ನು ಮತದಾರಿಗೆ ತಿಳಿಸಿ ಮತಯಾಚನೆ ಮಾಡಲಾಗುತ್ತದೆ ಎಂದ ಅವರು, ವಿಜಯಶಂಕರ್ ಅವರಿಗೆ ಮತ ನೀಡಿ ಗೆಲ್ಲಿಸಲು ಶ್ರಮಿಸಬೇಕೆಂದು ಕಾರ್ಯಕರ್ತರಿಗೆ ತಿಳಿಸಿದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ಮೈತ್ರಿ ಸರ್ಕಾರದ 28 ಅಭ್ಯರ್ಥಿಗಳ ಪೈಕಿ 20 ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ನಗರ ಮಾಜಿ ಅಧ್ಯಕ್ಷ ಎಚ್.ವೈ.ಮಹದೇವ್, ಶಿವಕುಮಾರ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಹದೇವೇಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಫಜಲುಲ್ಲಾ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos