ಬಿರಿಯಾನಿ ತಿನ್ನಲು ಮೋದಿ ಪಾಕಿಸ್ತಾನಕ್ಕೆ ಹೋಗಿದ್ದರು: ಪ್ರಿಯಾಂಕಾ ಗಾಂಧಿ

ಬಿರಿಯಾನಿ ತಿನ್ನಲು ಮೋದಿ ಪಾಕಿಸ್ತಾನಕ್ಕೆ ಹೋಗಿದ್ದರು: ಪ್ರಿಯಾಂಕಾ ಗಾಂಧಿ

ಅಯೋಧ್ಯಾ, ಮಾ.30, ನ್ಯೂಸ್ ಎಕ್ಸ್ ಪ್ರೆಸ್:  ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ‘ಬಿರಿಯಾನಿ ತಿನ್ನುವ ಸಲುವಾಗಿ ಮೋದಿ ಅವರು ಪಾಕಿಸ್ತಾನಕ್ಕೆ ತೆರಳಿದ್ದರು’ ಎಂದು ವ್ಯಂಗ್ಯವಾಡಿದ್ದಾರೆ.

ಇಡೀ ದೇಶ ಇಂದು ಧ್ವನಿಯಲ್ಲಿ ಮಾತನಾಡಿದರೆ, ಕಾಂಗ್ರೆಸ್ ಬೇರೆಯದೇ ಧ್ವನಿಯಲ್ಲಿ ಮಾತನಾಡುತ್ತಿದೆ. ಬಾಲಕೋಟ್‌ನಲ್ಲಿ ಭಯೋತ್ಪಾದಕರ ಮೇಲೆ ಭಾರತ ದಾಳಿ ನಡೆಸಿದ ಬಳಿಕ ದೇಶದ ಪರವಾಗಿ ಇಲ್ಲದ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ನೀಡುತ್ತಿದ್ದಾರೆ. ಪಾಕಿಸ್ತಾನವನ್ನು ಹೊಗಳುವ ಅಂತಹ ಭಾಷೆಯನ್ನು ಭಾರತೀಯ ನಾಗರಿಕರು ಹೇಗೆ ಒಪ್ಪಿಕೊಳ್ಳುತ್ತಾರೆ? ಎಂದು ನರೇಂದ್ರ ಮೋದಿ ಅವರು ಪ್ರಶ್ನಿಸಿದ್ದರು.

ಪಾಕಿಸ್ತಾನವು ಭಾರತದಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವುದನ್ನು ಬಯಸುತ್ತಿದೆ ಎಂದು ಬಿಜೆಪಿ ಹೇಳಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಪ್ರಿಯಾಂಕಾ, ಪ್ರಧಾನಿ ಮೋದಿ ಅವರು ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದರು ಎಂದು ಟೀಕಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos