ನರಸಿಂಹ ನಿಧನಕ್ಕೆ ಮೋದಿ ಸಂತಾಪ

  • In State
  • December 15, 2020
  • 160 Views
ನರಸಿಂಹ ನಿಧನಕ್ಕೆ ಮೋದಿ ಸಂತಾಪ

ಬೆಂಗಳೂರು: ಖ್ಯಾತ ವಿಜ್ಞಾನಿ, ಪದ್ಮ ವಿಭೂಷಣ ಪುರಸ್ಕೃತ ರೊದ್ದ ನರಸಿಂಹ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ರೊದ್ದಂ ನರಸಿಂಹ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೊದ್ದಂ ನರಸಿಂಹ ಅವರು ಭಾರತದ ಅತ್ಯುತ್ತಮ ಜ್ಞಾನ ಮತ್ತು ವಿಚಾರಣೆಯ ಸಂಪ್ರದಾಯವನ್ನು ನಿರೂಪಿಸಿದ್ದಾರೆ. ಅವರು ಅತ್ಯುತ್ತಮ ವಿಜ್ಞಾನಿಯಾಗಿ, ಭಾರತದ ಪ್ರಗತಿಗೆ ವಿಜ್ಞಾನ ಮತ್ತು ನಾವೀನ್ಯತೆಯ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳುವ ಕುರಿತಂತೆ ಉತ್ಸುಕರಾಗಿದ್ದರು.
ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಏರೋಸ್ಪೇಸ್ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ರೊದ್ದಂ ನರಸಿಂಹ ಅವರ ಕೊಡುಗೆ ಮಹತ್ವಪೂರ್ಣವಾದುದು. ಇಂಗ್ಲಿಷ್, ಕನ್ನಡ ಮತ್ತು ಸಂಸ್ಕೃತ ಭಾಷಾ ಪ್ರವೀಣರಾಗಿದ್ದ ಅವರು ವಿಜ್ಞಾನ ಮತ್ತು ತತ್ವಜ್ಞಾನದ ನಡುವಿನ ಸಂಬಂಧದ ಕುರಿತಂತೆ ರಚಿಸಿದ ಕೃತಿಗಳೂ ಅಷ್ಟೇ ಮಹತ್ವ ಹೊಂದಿದ್ದವು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಿಸಿದ್ದಾರೆ.
ಅವರ ನಿಧನದಿಂದ ದೇಶ ಶ್ರೇಷ್ಠ ವಿಜ್ಞಾನಿಯೊಬ್ಬರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಭಗವಂತನು ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರು, ಅಭಿಮಾನಿ ಬಳಗದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಖ್ಯಾತ ಏರೋಸ್ಪೇಸ್ ವಿಜ್ಞಾನಿ, ಪದ್ಮ ವಿಭೂಷಣ ಪ್ರೊಫೆಸರ್ ರೊದ್ದಂ ನರಸಿಂಹ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಭಾರತೀಯ ವಿಜ್ಞಾನಕ್ಕೆ ಅವರ ಕೊಡುಗೆ ಅಪಾರ. ಭಾರತದ ಸರ್ಕಾರದ ಬಾಹ್ಯಾಕಾಶ ಆಯೋಗ, ಪ್ರಧಾನಮಂತ್ರಿಗಳ ವಿಜ್ಞಾನ ಸಲಹಾ ಮಂಡಳಿ ಮತ್ತು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಗಳಲ್ಲಿನ ಅವರ ಸೇವೆಯನ್ನು ಸದಾ ಸ್ಮರಿಸಲಾಗುತ್ತದೆ ಎಂದು ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ನಾಡಿನ ಹೆಸರಾಂತ ವಿಜ್ಞಾನಿ,ಪದ್ಮಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ರೊದ್ದಂ ನರಸಿಂಹ ಅವರ ನಿಧನ ಅಪಾರ ನೋವನ್ನುಂಟು ಮಾಡಿದೆ. ವೈಜ್ಞಾನಿಕ ಕ್ಷೇತ್ರದಲ್ಲಿ ರೊದ್ದಂ ನರಸಿಂಹ ಅವರ ಕೊಡುಗೆ ಅವಿಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos