ಪಾಕಿಸ್ತಾನ ಸೃಷ್ಟಿಗೆ ಕಾಂಗ್ರೆಸ್ ಕಾರಣ : ಮೋದಿ

ಪಾಕಿಸ್ತಾನ ಸೃಷ್ಟಿಗೆ ಕಾಂಗ್ರೆಸ್ ಕಾರಣ : ಮೋದಿ

ಮಹಾರಾಷ್ಟ್ರ, ಏ. 9, ನ್ಯೂಸ್ ಎಕ್ಸ್ ಪ್ರೆಸ್: ಪಾಕಿಸ್ತಾನ ಸೃಷ್ಟಿಯಾಗಿ ಇಂದು ಏಷ್ಯಾ ಯಾ ಖಂಡದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಯಾಗಿರುವುದಕ್ಕೆ ಕಾಂಗ್ರೆಸ್‍ಯೇ ಕಾರಣವೆಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಬಹುತೇಕ 3 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಚುನಾವಣಾ ಪ್ರಚಾರಾಂದೋಲನಕ್ಕಾಗಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಮಹಾರಾಷ್ಟ್ರದ ಲಾತೂರ್‍ನಲ್ಲಿ ಇಂದು ನಡೆದ ಬಿಜೆಪಿ -ಶಿವಸೇನೆ ಮಿತ್ರ ಪಕ್ಷಗಳ ಚುನಾವಣಾ ರ್ಯಾಲಿಯಲ್ಲಿ ಈ ನಾಯಕರು ಒಂದೇ ವೇದಿಕೆಯಲ್ಲಿ ಆಸೀನರಾಗಿ ಮೋದಿ ಮತ್ತು ಠಾಕ್ರೆ ಭಾಷಣ ಮಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಕೆಲವು ಕಾಂಗ್ರೆಸ್ ನಾಯಕರ ದುರ್ಬಲ ಧೋರಣೆಯಿಂದ ಪಾಕಿಸ್ತಾನ ಸೃಷ್ಟಿಯಾಯಿತು. ಈಗ ದೇಶ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಾ ಏಷ್ಯಾ ಖಂಡದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ ಇದಕ್ಕೆಲ್ಲ ಕಾಂಗ್ರೆಸ್ ನಾಯಕರು ಕಾರಣ ಎಂದು ಮೋದಿ ಆರೋಪಿಸಿದರು. ಪ್ರಥಮ ಭಾರಿ ಮತಚಲಾಯಿಸುವ ಯುವಕ-ಯುವತಿಯರು ಬಾಲಾಕೋಟ್‍ನಲ್ಲಿ ಉಗ್ರರ ವಿರುದ್ಧ ವಾಯುದಾಳಿ ನಡೆಸಿದ ವೀರಯೋಧರ ಗೌರವಾರ್ಥ ತಮ್ಮ ಹಕ್ಕುಗಳನ್ನು ಚಲಾಯಿಸುವಂತೆ ಪ್ರಧಾನಿ ಮನವಿ ಮಾಡಿದರು. ಉದ್ಭವ್ ಠಾಕ್ರೆ ಮಾತನಾಡಿ, ಭಾರತದ ಕಡೆ ತಿರುಗಿ ನೋಡದ ರೀತಿಯಲ್ಲಿ ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಬೇಕು ಎಂದು ಮೋದಿ ಅವರಿಗೆ ಮನವಿ ಮಾಡಿದರು. ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟದಿಂದ ಕಾಂಗ್ರೆಸ್ ನಾಯಕರು ಬೆಚ್ಚಿ ಬಿದಿದ್ದಾರೆ. ಮಹಾರಾಷ್ಟ್ರದಲ್ಲಿ ಆ ಪಕ್ಷ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು. ಮಹಾರಾಷ್ಟ್ರದಲ್ಲಿ ಎರಡೂ ಪಕ್ಷಗಳ ನಡುವೆ ಮೈತ್ರಿಯಾದ ನಂತರ ಇದೇ ಮೊದಲ ಬಾರಿಗೆ ಮೋದಿ-ಠಾಕ್ರೆ 28 ತಿಂಗಳುಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಎರಡು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಕೊಂಡಿದೆ. ಲಾತೂರ್ ಮತ್ತು ಉಸ್ಮಾನಾಬಾದ್‍ನ ಮಿತ್ರ ಪಕ್ಷಗಳ ಒಮ್ಮತದ ಅಭ್ಯರ್ಥಿ ಪರ ಮತಚಲಾಯಿಸುವಂತೆ ಮನವಿ ಮಾಡಿದರು. ಮೋದಿ ಮತ್ತು ಠಾಕ್ರೆ 2016ರ ಡಿಸೆಂಬರ್‍ನಲ್ಲಿ ಅರಬ್ಬೀ ಸಮುದ್ರದ ದಂಡೆಯಲ್ಲಿ ನಡೆದ ಛತ್ರಪತಿ ಶಿವಾಜಿ ಮಹಾರಾಜ್ ಅವರ ಬೃಹತ್ ಪುತ್ಥಳಿ ಶಿಲಾನ್ಯಾಸ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡಿದ್ದರು. ನಂತರ ಬೇರಾವ ಸಂದರ್ಭದಲ್ಲೂ ಇವರಿಬ್ಬರು ಕಾಣಿಸಿಕೊಳ್ಳುವ ಅವಕಾಶ ಕೂಡಿಬರಲಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos