ಮೋದಿ , ಟ್ರಂಪ್ ಜೊತೆ ಸಾತ್ವಿಕ್ ಸೆಲ್ಫಿ

ಮೋದಿ , ಟ್ರಂಪ್ ಜೊತೆ ಸಾತ್ವಿಕ್  ಸೆಲ್ಫಿ

ಕಾರವಾರ, ಸೆ. 24 : ಸಾತ್ವಿಕ್ ಹೆಗಡೆ  ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಪ್ರಧಾನಿ ಮೋದಿಯವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ. ಉತ್ತರ ಕನ್ನಡ ಜಿಲ್ಲೆ ಮೂಲದ ಈ ಬಾಲಕ ಸಾತ್ವಿಕ್ ಹೆಗಡೆ ಅಮೆರಿಕದ ಟೆಕ್ಸಾಸ್ ನಗರದಲ್ಲಿ ನಡೆದ ಹೌಡಿ-ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಪ್ರೆಸಿಡೆಂಟ್ ಡೊನಾಲ್ಡ್ ಟ್ರಂಪ್ ಜೊತೆಗೆ ಸೆಲ್ಪಿ ವಿಶ್ವದಾದ್ಯಂತ ವೈರಲ್ ಆಗಿದೆ.

ಮೋದಿಯವರನ್ನು ಸ್ವಾಗತ ಮಾಡುವ ಕಾರ್ಯಕ್ರಮದಲ್ಲಿ ಸಾತ್ವಿಕ್ ಹೆಗಡೆ ಭಾಗವಹಿಸಿದ್ದರು.
ಟೆಕ್ಸಾಸ್ನ ಲೂಯಿಸ್ ಡಿ ಬ್ರಾಂಡಿಸ್ ಶಾಲೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿರುವ 13 ವರ್ಷ ವಯಸ್ಸಿನ ಸಾತ್ವಿಕ್ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕರ್ಕಿಸವಲ್ನ ಮೇಧಾ ಮತ್ತು ಪ್ರಭಾಕರ ಹೆಗಡೆ ದಂಪತಿಯ ಮಗ. ಈ ದಂಪತಿಗಳು ಕಳೆದ 17 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos