ಮುಂಬೈ, ಸೆ. 25: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸ್ವಚ್ಛ ಭಾರತ ಆಂದೋಲನಕ್ಕಾಗಿ ನ್ಯಾಯಾರ್ಕ್ ನಲ್ಲಿ ಇಂದು ಸ್ವಚ್ಛ ಭಾರತ ಅಭಿಯಾನದ ರೂವಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕದ ಬಿಲ್ ಆ್ಯಂಡ್ ಮೆಲಿಂಡಾ ಗೇಟ್ಸ್ ಫೌಂಡೇಷನ್ನಿಂದ ಪ್ರತಿಷ್ಠಿತ ‘ಗ್ಲೋಬಲ್ ಗೋಲ್ಕೀಪರ್ ಅವಾರ್ಡ್’ ನೀಡಿ ಗೌರವಿಸಲಾಗಿದೆ.
2014ರಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಾಗ ಮೋದಿ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಇಂದಿಗೂ ಆ ಅಭಿಯಾನವನ್ನು ದೇಶದೆಲ್ಲೆಡೆ ಮುಂದುವರೆಸಿಕೊಂಡು ಹೋಗಲಾಗುತ್ತಿದೆ.
ಸ್ವಚ್ಛ ಭಾರತ ಅಭಿಯಾನವನ್ನು ಜನರ ಆಂದೋಲನವಾಗಿ ಪರಿವರ್ತನೆ ಮಾಡಿದ ಎಲ್ಲ ಭಾರತೀಯರಿಗೆ ಈ ಪ್ರಶಸ್ತಿಯನ್ನು ಮೋದಿ ಅರ್ಪಣೆ ಮಾಡಿದ್ದಾರೆ.