ನವದೆಹಲಿ, ಮಾ, 27, ನ್ಯೂಸ್ ಎಕ್ಸ್ ಪ್ರೆಸ್: ಬಾಹ್ಯಾಕಾಶದ ಸಾಧನೆಗಾಗಿ ವಿಜ್ಞಾನಿಗಳನ್ನು ಅಭಿನಂದಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇದೇ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ವಿಶ್ವ ರಂಗ ಭೂಮಿ ದಿನದ ಅಂಗವಾಗಿ ಶುಭ ಹಾರೈಸಿದ್ದಾರೆ.
ನರೇಂದ್ರ ಮೋದಿ ಇಂದು ರಾಷ್ಟ್ರವನ್ನುದ್ದೇಶಿಸಿ ಮಾಡಿರುವ ಭಾಷಣದಲ್ಲಿ ಬಾಹ್ಯಾಕಾಶದಲ್ಲಿ 300 ಕಿ.ಮೀ. ದೂರದಲ್ಲಿರುವ ಉಪಗ್ರಹವನ್ನು ಕೇವಲ ಮೂರು ನಿಮಿಷಗಳಲ್ಲಿ ಹೊಡೆದುರುಳಿಸುವ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಸೂಪರ್ ಪವರ್ ದೇಶವಾಗಿ ಹೊರಹೊಮ್ಮಿದೆ ಎಂದು ಪ್ರಕಟಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.
ಬಾಹ್ಯಾಕಾಶದಲ್ಲಿ ಭಾರತದ ಸಾಧನೆಗಾಗಿ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ. ಆದರೆ ಇದೇ ವೇಳೆ ಮೋದಿಗೂ ಶುಭ ಹಾರೈಸಿದ್ದಾರೆ.
Well done DRDO, extremely proud of your work.
I would also like to wish the PM a very happy World Theatre Day.
— Rahul Gandhi (@RahulGandhi) March 27, 2019