ಹನೂರು, ಡಿ. 29 : ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮಲೈಮಹದೇಶ್ವರಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಈ ಬಾರಿ ಕೇವಲ ಒಂದು ತಿಂಗಳ ಅವಧಿಯಲ್ಲಿ 1.88 ಕೋಟಿ ರೂ. ಸಂಗ್ರಹವಾಗಿದೆ. ಕಾರ್ತೀಕ ಅಮಾವಾಸ್ಯೆ ಹುಣ್ಣಿಮೆ ಇನ್ನಿತರ ವಿಶೇಷ ದಿನಗಳಲ್ಲಿ ಮಾದಪ್ಪನ ಸನ್ನಿಧಿಗೆ ನೆರೆರಾಜ್ಯ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಲಕ್ಷಾಂತರ ಭಕ್ತರು ಹಣ, ಚಿನ್ನ-ಬೆಳ್ಳಿ ಪದಾರ್ಥಗಳನ್ನು ಹುಂಡಿಯಲ್ಲಿ ಹಾಕಿದ್ದರು.ಆ ಹಿನ್ನೆಲೆಯಲ್ಲಿ ಎಣಿಕೆ ಕಾರ್ಯ ಕೈಗೊಳ್ಳಲಾಗಿತ್ತು.
ಹುಂಡಿಯಲ್ಲಿ 1.18 ಕೋಟಿ ರೂ. ನಗದು 48ಗ್ರಾಂ. ಚಿನ್ನ ಹಾಗೂ 1ಕೆಜಿ 800 ಗ್ರಾಂ. ಬೆಳ್ಳಿ ಸಂಗ್ರಹವಾಗಿತ್ತು. ಕಳೆದ ತಿಂಗಳು 1,41,85,474 ಲಕ್ಷ ರೂ. ನಗದು 40 ಗ್ರಾಂ. ಚಿನ್ನ ಹಾಗೂ 1 ಕೆಜಿ 891 ಗ್ರಾಂ. ಬೆಳ್ಳಿ ಸಂಗ್ರಹವಾಗಿತ್ತು. ಹುಂಡಿ ಎಣಿಕೆ ಕಾರ್ಯ ಬಸ್ ನಿಲ್ದಾಣದ ಬಳಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ನಿನ್ನೆ ಬೆಳಗ್ಗೆ 7 ರಿಂದ ಸಂಜೆ 6ರ ವರಗೆ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ನಡೆಯಿತು.