ಕೈ ಕೊಟ್ಟ ಮುಂಗಾರು ಮಳೆ; ಹೆಚ್ಚುತ್ತಿರುವ ತಾಪಮಾನ

ಕೈ ಕೊಟ್ಟ ಮುಂಗಾರು ಮಳೆ; ಹೆಚ್ಚುತ್ತಿರುವ ತಾಪಮಾನ

ಬೆಂಗಳೂರು: ಈ ಭಾರಿ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಬೆನ್ನಲ್ಲೇ ರಾಜ್ಯಾದ್ಯಾಂದ ತಾಪಮಾನ ಬೇಸಿಗೆ ಹೆಚ್ಚುತ್ತಿದ್ದು ರೈತರು ಕಂಗಾಲಾಗುತ್ತಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು. ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಿರುವುದರಿಂದ ಅಕ್ಷರಶಃ ಜನತೆಗೆ ಬೇಸಿಗೆ ಕಾಲದ ಅನುಭವವಾಗುತ್ತಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಂಕಿಅಂಶಗಳ ಪ್ರಕಾರ, ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಗಳ ಸಂಖ್ಯೆ ಜುಲೈ ಅಂತ್ಯದಲ್ಲಿ 14 ರಿಂದ 20 ಜಿಲ್ಲೆಗಳಿಗೆ ಏರಿಕೆಯಾಗಿದೆ. ಈ ಜಿಲ್ಲೆಗಳು ಶೇ.20-45ರಷ್ಟು ಮಳೆ ಕೊರತೆ ದಾಖಲಿಸಿವೆ. ಜೂನ್ 1 ರಂದು ಮುಂಗಾರು ಆರಂಭವಾದಾಗಿನಿಂದ ರಾಜ್ಯದಲ್ಲಿ 666 ಮಿ.ಮೀ ಮಳೆಯಾಗಬೇಕಿತ್ತು, ಆದರೆ ಕೇವಲ 485 ಮಿ.ಮೀ ಮಳೆ ದಾಖಲಾಗಿದೆ.
ಐಎಂಡಿ ಹವಾಮಾನ ವರದಿ ಪ್ರಕಾರ ಮಂಡ್ಯದಲ್ಲಿ ಭಾನುವಾರ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಸಾಮಾನ್ಯಕ್ಕಿಂತ 6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಗದಗದಲ್ಲಿ ವಾಡಿಕೆಗಿಂತ 4 ಡಿಗ್ರಿ ಸೆಲ್ಸಿಯಸ್ ಅಧಿಕ ಅಂದರೆ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರು, ಕಲಬುರಗಿ, ಮಂಗಳೂರು, ಬೀದರ್ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ 3 ಡಿಗ್ರಿ ಸೆಲ್ಸಿಯಸ್ನಷ್ಟು ವ್ಯತ್ಯಾಸವಾಗಿದೆ. ಕನಿಷ್ಠ ತಾಪಮಾನದಲ್ಲೂ ವ್ಯತ್ಯಯವಾಗಿದೆ. ವಿಜಯಪುರದಲ್ಲಿ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಮತ್ತು ಬೆಳಗಾವಿಯಲ್ಲಿ ಒಂದು ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದೆ. ಇಂತಹ ಹವಮಾನ ವೈಪರೀತ್ಯದೊಂದಿಗೆ, ಮುಂದಿನ ಚಳಿಗಾಲದಲ್ಲಿ ವಿಪರೀತ ಚಳಿಯಾಗುವ ಸಾಧ್ಯತೆಗಳಿವೆ ಎಂದು ಕೆಎಸ್ಎನ್ಡಿಎಂಸಿ ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ವಿವರಿಸಿದ್ದಾರೆ.

ವರದಿ
ಮಂಜುನಾಥ.ಲಕ್ಕಿಮರ(ವಿಜಯನಗರ)

ಫ್ರೆಶ್ ನ್ಯೂಸ್

Latest Posts

Featured Videos